Mysore
20
mist

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಯಾರ ಲಾಬಿಗೂ ಮಣಿಯುವುದಿಲ್ಲ. ಕಸ ವಿಲೇವಾರಿಗೆ ಮೀಸಲಿಟ್ಟ ಜಾಗದಲ್ಲಿ ಶೆಡ್‌ ನಿರ್ಮಿಸಿಕೊಂಡಿದ್ದರು. ಬಡವರು ಅಕ್ರಮವಾಗಿ ಶೆಟ್‌ ನಿರ್ಮಿಸಿಕೊಂಡಿದ್ದರು. ಅವರನ್ನು ಒಕ್ಕಲೆಬ್ಬಿಸಿಲ್ಲ. ಅವರಿಗೆ ಪುನರ್‌ ವಸತಿ ಕಲ್ಪಿಸುವುದು ನಮ್ಮ ಜವಾಬ್ದಾರಿ. ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ವಸತಿ ನೀಡಬೇಕಾಗಿರುವುದು ಸರ್ಕಾರದ ಕೆಲಸ. ಇದರಲ್ಲಿ ಯಾರ ಓಲೈಕೆ ಬರಲ್ಲ. ಈ ವಿಚಾರದಲ್ಲಿ ಸರ್ಕಾರಕ್ಕೆ ಹೆದರಿಕೆ ಇಲ್ಲ. ಯಾರ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯಲ್ಲ. ಕೇರಳದಲ್ಲಿ ಪ್ರವಾಹ ಆದಾಗ ನಾವು ಅಲ್ಲಿ ವಸತಿ ಕಲ್ಪಿಸಿಲ್ವಾ? ಅತಿಕ್ರಮ ಪ್ರವೇಶ ಮಾಡಿದವರಿಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೇಳಿದರು.

 

Tags:
error: Content is protected !!