ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಯಾರ ಲಾಬಿಗೂ ಮಣಿಯುವುದಿಲ್ಲ. ಕಸ ವಿಲೇವಾರಿಗೆ ಮೀಸಲಿಟ್ಟ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡಿದ್ದರು. ಬಡವರು ಅಕ್ರಮವಾಗಿ ಶೆಟ್ ನಿರ್ಮಿಸಿಕೊಂಡಿದ್ದರು. ಅವರನ್ನು ಒಕ್ಕಲೆಬ್ಬಿಸಿಲ್ಲ. ಅವರಿಗೆ ಪುನರ್ ವಸತಿ ಕಲ್ಪಿಸುವುದು ನಮ್ಮ ಜವಾಬ್ದಾರಿ. ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ವಸತಿ ನೀಡಬೇಕಾಗಿರುವುದು ಸರ್ಕಾರದ ಕೆಲಸ. ಇದರಲ್ಲಿ ಯಾರ ಓಲೈಕೆ ಬರಲ್ಲ. ಈ ವಿಚಾರದಲ್ಲಿ ಸರ್ಕಾರಕ್ಕೆ ಹೆದರಿಕೆ ಇಲ್ಲ. ಯಾರ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯಲ್ಲ. ಕೇರಳದಲ್ಲಿ ಪ್ರವಾಹ ಆದಾಗ ನಾವು ಅಲ್ಲಿ ವಸತಿ ಕಲ್ಪಿಸಿಲ್ವಾ? ಅತಿಕ್ರಮ ಪ್ರವೇಶ ಮಾಡಿದವರಿಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೇಳಿದರು.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…