ಬೆಂಗಳೂರು: ಸಂವಿಧಾನದ ವಿರುದ್ಧ ವಿಷಕಾರುವವರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಲಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಗ್ರಹಿಸಿದ್ದಾರೆ.
ರಾಮರಾಜ್ಯ, ಮನುಸ್ಮೃತಿ, ಧರ್ಮಶಾಸ್ತ್ರ ಹಾಗೂ ಚಾಣಕ್ಯನ ಪುಸ್ತಕಗಳನ್ನು ಆಧರಿಸಿದ 501 ಪುಟಗಳ ಸಂವಿಧಾನವನ್ನು ಫೆಬ್ರವರಿ.3ರಂದು ಮಹಾಕುಂಭಮೇಳದಲ್ಲಿ ಅನಾವರಣ ಮಾಡುವುದಾಗಿ ಉತ್ತರ ಪ್ರದೇಶದ ಶಾಂಭವಿ ಪೀಠಾಧೀಶ್ವರ ಸ್ವಾಮಿ ಆನಂದ್ ಸ್ವರೂಪ್ ಮಹಾರಾಜ್ ಹೇಳಿದ್ದರು.
ಸ್ವಾಮೀಜಿ ಹೇಳಿಕೆ ಖಂಡಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು, ಪತ್ರಿಕಾ ಹೇಳಿಕೆ ನೀಡಿದ ಕಿಡಿಕಾರಿದ್ದಾರೆ.
ಇಡೀ ದೇಶವೇ ಎಲ್ಲರ ಹಿತ ಕಾಯುವ ಮತ್ತು ಜನ ಸಾಮಾನ್ಯರ ಸಮಾನವಾದ ಏಳಿಗೆಯನ್ನು ಬಯಸಿದ ದೇಶದ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿದ್ದರೆ ಅತ್ತ ಭಾರತದ ಭಾಗವೇ ಆಗಿರುವ ಉತ್ತರ ಪ್ರದೇಶದಲ್ಲಿ ಶಾಂಭವಿ ಪೀಠಾಧೀಶ್ವರ ಸ್ವಾಮಿ ಆನಂದ್ ಸ್ವರೂಪ್ ಮಹಾರಾಜ್ ಅವರು ರಾಮರಾಜ್ಯ, ಮನುಸ್ಮೃತಿ, ಧರ್ಮಶಾಸ್ತ್ರ ಹಾಗೂ ಚಾಣಕ್ಯನ ಪುಸ್ತಕಗಳನ್ನು ಆಧರಿಸಿದ 501 ಪುಟಗಳ ಸಂವಿಧಾನವನ್ನು ಅನಾವರಣ ಮಾಡುವುದಾಗಿ ಹೇಳಿದ್ದಾರೆ.
ಇದನ್ನು ದ್ರೋಹದ ಕೃತ್ಯ ಎಂದು ಜನರಿಗೆ ತಿಳಿಸುವ ಪ್ರಯತ್ನವನ್ನು ಮಾಧ್ಯಮಗಳು ಮಾಡದಿರುವುದು ನನ್ನಲ್ಲಿ ಅಚ್ಚರಿ ಮೂಡಿಸಿದೆ ಎಂದರು.
ಸಂವಿಧಾನದ ಮಹತ್ವ ಅರಿಯದೇ, ವಿಷಕಾರಿಯಾಗಿ ವರ್ತಿಸುವ ಇಂತ ಸ್ವಾಮೀಜಿಗಳ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ದೇಶದ್ರೋಹದ ಪ್ರಕರಣವನ್ನು ದಾಖಲಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…