ಬೆಂಗಳೂರು : ನೀರು ಬಿಟ್ಟು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ನೀರು ಬಿಟ್ಟಿದ್ದಕ್ಕೆ ಶಹಬ್ಬಾಶ್ ಗಿರಿ ಕೊಡಲು ಸಭೆಗೆ ಹೋಗಬೇಕಿತ್ತಾ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.
ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ನಡೆದ ಸರ್ವಪಕ್ಷಗಳ ಸಭೆಗೆ ಗೈರಾದ ವಿಚಾರಕ್ಕೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿಕೆ, ಸಿಡಬ್ಲ್ಯೂಆರ್ ಸಿ ಶಿಫಾರಸು ಹಿನ್ನೆಲೆ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಅವರು ಸಭೆ ಕರೆದಿದ್ದರು..? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದುಹೋಗಿದೆ. ಕಬಿನಿಯಿಂದ ನೀರು ಹರಿದಿದೆ. ಸಭೆಯಲ್ಲಿ ಕೊಡುವ ಗೋಡಂಬಿ, ಬಾದಾಮಿ ತಿನ್ನೋದಿಕ್ಕೆ ನಾನು ಹೋಗಬೇಕಿತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಯಾಕೆ ಸಭೆ ಮಾಡಿದ್ದೀರಿ..? ಏನು ನಿರ್ಧಾರ ತೆಗೆದುಕೊಂಡರಿ..? ಸಭೆ ಮಾಡಿದ ಮೇಲೂ ಕಡಿಮೆ ಪ್ರಮಾಣದ ನೀರು ಬಿಡಲು ಒಪ್ಪಿಗೆ ಸೂಚಿಸಿದೆ. ತೆಲಂಗಾಣಕ್ಕೆ ಹೋದರೆ ಅಲ್ಲಿ ಸಿಎಂ ಫೋನ್ ಮಾಡಿ ಸಹಕಾರ ಕೇಳ್ತಾರೆ. ಆದರೆ ನಾನು ರಾಜ್ಯದ ಯೋಜನೆಗಳಿಗೆ ಸಹಿ ಹಾಕಿದರೆ ಅದನ್ನ ನಿಲ್ಲಿಸುತ್ತಾರೆ ಎಂದು ಕಿಡಿಕಾರಿದರು.
ಜೊತೆಗೆ ಮಂಡ್ಯದಲ್ಲಿ ಜನತಾ ದರ್ಶನ ಮಾಡಿದರೆ ಅಧಿಕಾರಿಗಳು ಭಾಗಿಯಾಗಬಾರದು ಎಂದು ಆದೇಶ ಮಾಡಿದ್ದಾರೆ. ಅಧಿಕಾರಿಗಳ ಸಭೆ ನಡೆಸಬಾರದು ಎಂದು ಆದೇಶ ಮಾಡಿದ ಮೇಲೆ ನಮ್ಮಿಂದ ಏನು ಬಯಸುತ್ತೀರಾ…? ಯಾವ ಸಂದರ್ಭ ಯಾವ ಕಾರ್ಯಕ್ರಮಕ್ಕೆ ಹೋಗಬೇಕು ಎಂದು ನನಗೆ ಗೊತ್ತಿದೆ. ನಾನು ಇವರ ಅನುಮತಿ ಪಡೆಯಬೇಕಾ ಎಂದು ವಾಗ್ದಾಳಿ ನಡೆಸಿದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…