ರಾಜ್ಯ

ಅಂಗನವಾಡಿ ಕಾರ್ಯಕರ್ತೆ ಸಂಘಟನೆ ಜೊತೆ ಸಚಿವೆ ಹೆಬ್ಬಾಳಕರ್‌ ; ಮಹತ್ವದ ಚರ್ಚೆ

2011ರ ನಂತರ ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ನೀಡುವುದರ ಬಗ್ಗೆ ಸಭೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, ಅಂಗನವಾಡಿಯ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚರ್ಚೆ ನಡೆಸಿದರು.

ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ‌ ಜೊತೆ ಚರ್ಚೆ ನಡೆಸಿ‌‌ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಈಗಾಗಲೇ ಸರ್ಕಾರ 2023-24ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ನಿವೃತ್ತಿ ಬಳಿಕ ಗ್ರ್ಯಾಚ್ಯುಟಿಗೆ ಆಡಳಿತಾತ್ಮಕ ಅನುಮತಿ ನೀಡಲಾಗಿದೆ. ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಂಘಟನೆಗಳ ಬೇಡಿಕೆಯಂತೆ 2011ರಿಂದ ಗ್ರ್ಯಾಚ್ಯುಟಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ‌ಬಿ.ಎಚ್‌.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಅಂಗನವಾಡಿ ನೌಕರರ‌ ಸಂಘದ ರಾಜ್ಯಾಧ್ಯಕ್ಷರಾದ ವರಲಕ್ಷ್ಮೀ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

2 hours ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

2 hours ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

2 hours ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

2 hours ago

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

14 hours ago