2011ರ ನಂತರ ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ನೀಡುವುದರ ಬಗ್ಗೆ ಸಭೆ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, ಅಂಗನವಾಡಿಯ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಚರ್ಚೆ ನಡೆಸಿದರು.
ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಈಗಾಗಲೇ ಸರ್ಕಾರ 2023-24ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ನಿವೃತ್ತಿ ಬಳಿಕ ಗ್ರ್ಯಾಚ್ಯುಟಿಗೆ ಆಡಳಿತಾತ್ಮಕ ಅನುಮತಿ ನೀಡಲಾಗಿದೆ. ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಂಘಟನೆಗಳ ಬೇಡಿಕೆಯಂತೆ 2011ರಿಂದ ಗ್ರ್ಯಾಚ್ಯುಟಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ವರಲಕ್ಷ್ಮೀ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…