AICC President
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯಲ್ಲಿ ವಿಶೇಷವೇನಿಲ್ಲ. ಸೌಹಾರ್ದಯುತ ಭೇಟಿ ಇದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ ಭೇಟಿ ನೀಡಿ, ಕುಶಲೋಪರಿ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಖರ್ಗೆ ಅವರು ನಮ್ಮ ಪಕ್ಷದ ಧುರೀಣರು ಅವರ ಆಶೀರ್ವಾದ ಪಡೆಯುವ ಸಲುವಾಗಿ ಭೇಟಿ ಮಾಡಿದೆ ಎಂದರು.
ಖರ್ಗೆ ಅವರೊಂದಿಗೆ ಸುಮಾರು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಹಲವು ದಿನಗಳ ಬಳಿಕ ಅವರನ್ನು ಭೇಟಿ ಮಾಡಿದೆ. ಕಳೆದ ಬಾರಿ ದೆಹಲಿ ಪ್ರವಾಸಕ್ಕೆ ತೆರಳಿದಾಗಲೂ ಖರ್ಗೆ ಸಾಹೇಬರು ಸಿಕ್ಕಿರಲಿಲ್ಲ. ಅವರ ಮಾರ್ಗದರ್ಶನ ನಮಗೆ ಅಗತ್ಯ. ನಮ್ಮಇಲಾಖೆ, ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ನನ್ನ ಆರೋಗ್ಯವನ್ನು ವಿಚಾರಿಸಿದರು. ಜಿಲ್ಲಾ ಪ್ರವಾಸ ಮಾಡುತ್ತಿದ್ದೀರಾ ಅಂತ ಕೇಳಿದರು. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅರ್ಹ ಮಹಿಳೆಯರಿಗೆ ಯೋಜನೆಯ ಹಣ ತಲುಪುತ್ತಿದ್ಯಾ, ಇಲಾಖೆಯ ಕಾರ್ಯವೈಖರಿ ಬಗ್ಗೆಯೂ ಕೇಳಿದರು ಎಂದು ಸಚಿವರು ತಿಳಿಸಿದರು.
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…