Mysore
22
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

ಬೆಂಗಳೂರಿನಲ್ಲಿ ಅಪಾಯಕಾರಿ ವೃಕ್ಷ, ಕೊಂಬೆ ತೆರವಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಭಾರೀ ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ ಹಾಗೂ ಆಸ್ತಿಹಾನಿ ಆಗುತ್ತಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ವೃಕ್ಷಗಳು ಹಾಗೂ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡಿದ್ದ 29 ವರ್ಷದ ಅಕ್ಷಯ್‌ ಮೃತಪಟ್ಟಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಅವರು, ಮಳೆ, ಗಾಳಿಗೆ ಟೊಳ್ಳು ಮರಗಳು ಮತ್ತು ಬೇರು ಕಚ್ಚದ ಮರಗಳು ಧರೆಗುರುಳುತ್ತಿವೆ. ಇದಕ್ಕೆ ಕಾರಣ ಬೇರಿಗೆ ನೀರು ಇಳಿಯದಂತೆ ಹಾಕಿರುವ ಕಾಂಕ್ರೀಟ್‌, ಕಲ್ಲಿನ ಚಪ್ಪಡಿ, ಟೈಲ್ಸ್‌ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು ತೀರ್ಪು ನೀಡಿದ್ದು, ಸರ್ಕಾರ ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಿದೆ. ನಿನ್ನೆ ತಾನೇ ಬಿಬಿಎಂಪಿ ಆಯುಕ್ತರು ಮರದ ಸುತ್ತ ಇರುವ ಕಾಂಕ್ರಿಟ್‌ ತೆರವಿಗೆ ಆದೇಶ ನೀಡಿದ್ದಾರೆ. ಇನ್ನು ಮುಂದೆ ರಸ್ತೆ ಬದಿ ಸಸಿಗಳನ್ನು ನೆಡುವಾಗ ಒಂದು ಮೀಟರ್‌ ಸುತ್ತಳತೆಯಲ್ಲಿ ಮಣ್ಣು ಇರುವುದನ್ನ ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

Tags:
error: Content is protected !!