ಬೆಂಗಳೂರು: ರಾಜ್ಯದ 48 ರಾಜಕೀಯ ಮುಖಂಡರ ಸಿಡಿ, ಪೆನ್ ಡ್ರೈವ್ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಸದನದಲ್ಲಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರು, ಇದರ ಬಗ್ಗೆ ದೂರು ಕೊಡುತ್ತೇನೆ. ಗೃಹ ಸಚಿವರು ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ತುಮಕೂರಿನ ಇಬ್ಬರು ಪ್ರಭಾವಿ ಸಚಿವರು ಹನಿಟ್ರ್ಯಾಪ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ಎಂಬ ಸುದ್ದಿಗಳು ಬರುತ್ತಿವೆ. ತುಮಕೂರಿನಲ್ಲಿ ಇರೋದು ನಾನು ಮತ್ತು ಪರಮೇಶ್ವರ್ ಅವರು ಮಾತ್ರ. ಸಿಡಿ, ಪೆನ್‌ಡ್ರೈವ್ 48 ಜನರ ಮೇಲೆ ಮಾಡಲಾಗಿದೆ. ಎಲ್ಲಾ ಪಕ್ಷದವರ ಮೇಲೂ ಸಿಡಿ, ಪೆನ್‌ಡ್ರೈವ್ ಇದೆ. ಕೆಲವರು ಈಗಾಗಲೇ ಸ್ಟೇ ತಗೊಂಡಿದ್ದಾರೆ. ಇದು ನಮ್ಮ ರಾಜ್ಯಕ್ಕೆ ಸೀಮಿತ ಆಗಿಲ್ಲ. ಈ ಬಗ್ಗೆ ಗೃಹ ಸಚಿವರಿಗೆ ಲಿಖಿತ ದೂರು ಕೊಡುತ್ತೇನೆ ಎಂದು ಹೇಳಿದರು.





