ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಡಿಸಿಎಂ ಡಿಕೆಶಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.
ಇದಕ್ಕೆಲ್ಲಾ ಡಿ.ಕೆ.ಶಿವಕುಮಾರ್ ಕಾರಣವೇ ಹೊರತು ಬೇರೆ ಯಾರೂ ಅಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಆರೋಪದ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ ಅವರು, ಮುನಿರತ್ನನನ್ನೇ ಮೊದಲು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಯಾಕೆಂದರೆ ಮುನಿರತ್ನ ಮೊದಲೆಲ್ಲಾ ಡಿಕೆಶಿ ಜೊತೆಯಲ್ಲೇ ಇದ್ದರು. ಆದ್ದರಿಂದ ಅವರನ್ನು ಮಂಪರು ಪರೀಕ್ಷೆ ಮಾಡಿಸಿ ಎಂದರು.





