ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೇಜಾರಾಗಲು ಅವರ ಆಸ್ತಿ ಬರೆಸಿಕೊಂಡಿದ್ದೀವಾ ಎನ್ನುವ ಮೂಲಕ ಸಚಿವ ಕೆ.ಎನ್.ರಾಜಣ್ಣ ಅವರು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.
ಡಿನ್ನರ್ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾರ್ಟಿ ಕ್ಯಾನ್ಸಲ್ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ. ಕ್ಯಾನ್ಸಲ್ ಇಲ್ಲ. ಈಗಾಗಲೇ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಕೂಡ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮೊನ್ನೆ ನಡೆದಿರುವ ಡಿನ್ನರ್ ಪಾರ್ಟಿ ಬಗ್ಗೆ ಗೊಂದಲ ಆಗಿದೆ. ಆ ಗೊಂದಲದ ಜೊತೆಗೆ ಇನ್ನೊಂದು ಗೊಂದಲ ಆಗೋದು ಬೇಡ. ಅದನ್ನು ಮುಂದೂಡಬೇಕು ಎಂದು ಹೇಳಿತ್ತು. ಅದಕ್ಕೆ ಸಭೆ ಮುಂದೂಡಿಕೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿನ್ನರ್ ಮೀಟಿಂಗ್ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಮುಂದಿನ ತಿಂಗಳ 14ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತದೆ. ಚಾಮರಾಜನಗರ ಜಿಲ್ಲೆಗೆ ಹೋದರೆ ಸಿಎಂ ಹಾಗೂ ಸಚಿವ ಸ್ಥಾನ ಹೋಗುತ್ತದೆ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುವ ಮೊದಲೇ ಡಿನ್ನರ್ ಮೀಟಿಂಗ್ ಮಾಡುತ್ತೇವೆ ಎಂದು ತಿಳಿಸಿದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೇಜಾರಾಗಲು ಅವರ ಆಸ್ತಿಯನ್ನು ಏನಾದರೂ ನಾವೆಲ್ಲಾ ಬರೆಸಿಕೊಂಡಿದ್ದೀವಾ? ಇದೆಲ್ಲಾ ಸುಮ್ಮನೆ ಅಷ್ಟೇ ಎಂದು ಡಿಕೆಶಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…