ತುಮಕೂರು: ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ.
ಸಕ್ರಿಯ ರಾಜಕೀಯದಲ್ಲಿ ಭಾಗಿಯಾಗಿ ಬೇಡದವರನ್ನು ಸೋಲಿಸುವುದು ಹಾಗೂ ಬೇಕಾದವರನ್ನು ಗೆಲ್ಲಿಸುವ ಕೆಲಸ ಮಾಡುತ್ತೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಪ್ರತಿನಿಧಿಸುವ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಪ್ರಯತ್ನ ಮುಂದುವರಿಸುತ್ತೇನೆ.
ಮುಂದಿನ ಬಾರಿ ಯಾವುದೇ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ಬದಲಾಗಿ ಪಕ್ಷದ ಏಳಿಗೆಗಾಗಿ ಶ್ರಮ ವಹಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.