Western Ghats
ಬೆಂಗಳೂರು : ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ, ಆಸ್ತಿಹಾನಿ, ಬೆಳೆ ಹಾನಿ, ಜೀವಿಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.
ಪಶ್ಚಿಮಘಟ್ಟ ಕ್ಷೀಣಿಸಿದರೆ ಮುಂಬರುವ ದಿನಮಾನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ತಾಳಿಕೊಳ್ಳುವ ಸಾಮರ್ಥ್ಯದ ಬಗ್ಗೆ ವರದಿ ಸಲ್ಲಿಸಲು ಜೀವವೈವಿಧ್ಯಮಂಡಳಿಯ ಸದಸ್ಯ ಕಾರ್ಯದರ್ಶಿ, ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ ಮತ್ತು ತರಬೇತಿ ಹಾಗೂ ಅರಣ್ಯ ಸಂರಕ್ಷಣೆ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ಸೂಚಿಸಿದ್ದಾರೆ.
ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ ಶೇ.60ರಷ್ಟು ಅರಣ್ಯ ಪ್ರದೇಶ ಇದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿರುವ ಈಶ್ವರ ಖಂಡ್ರೆ ಪಶ್ಚಿಮ ಘಟ್ಟದ ಪ್ರಾಮುಖ್ಯತೆ, ಸಂರಕ್ಷಣೆಯ ಮನವರಿಕೆ ಮಾಡಿಸಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…