ಗ್ರಂಥಾಲಯಕ್ಕೆ ಕುವೆಂಪು ಅವರ ಕಾನೂರು ಹೆಗ್ಗಡತಿ ಪುಸ್ತಕ ಉಡುಗೊರೆ ನೀಡಿದ ಸಚಿವರು
ಬೆಳಗಾವಿ : ಗೃಹಲಕ್ಷ್ಮಿ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.
ಮಲ್ಲವ್ವ ಮೇಟಿ ಅವರ ಕಾರ್ಯ ಇಡೀ ಸಮಾಜಕ್ಕೆ ಹಾಗೂ ರಾಜ್ಯಕ್ಕೆ ಮಾದರಿಯಾಗಿದೆ. ಮಲ್ಲವ್ವ ಮೇಟಿ ಕಾರ್ಯನೋಡಿದರೆ ಸಾವಿತ್ರಿಬಾಯಿ ಪುಲೆ ಬಳಿಕ ಆಧುನಿಕ ಅಕ್ಷರದ ಅವ್ವ ಎನ್ನಬಹುದು. ಅವರ ಕಾರ್ಯಕ್ಕೆ ಅಭಿನಂದನೆಗಳು ಎಂದರ.
ಗ್ರಂಥಾಲಯಕ್ಕೆ ‘ಗೃಹಲಕ್ಷ್ಮಿ’ ಹೆಸರಿಡಲು ಮನವಿ
ಮಲ್ಲವ್ವ ಮೇಟಿ ನಿರ್ಮಿಸಿರುವ ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಹೆಸರಿಡಲು ಸಚಿವರು ಮನವಿ ಮಾಡಿದರು. ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದ್ದು, ಈ ಯೋಜನೆಯ ಹೆಸರು ಅಜರಾಮರವಾಗಿರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರು ಕೂಡ ಈ ಯೋಜನೆಯ ಮೂಲಕ ಶಾಶ್ವತವಾಗಿ ಉಳಿಯಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗ್ರಂಥಾಲಯಕ್ಕೆ ‘ಕಾನೂರು ಹೆಗ್ಗಡತಿ’ ಪುಸ್ತಕ ಉಡುಗೊರೆ
ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಕಾನೂರು ಹೆಗ್ಗಡತಿ ಪುಸ್ತಕವನ್ನು ಸಚಿವರು ಗ್ರಂಥಾಲಯಕ್ಕೆ ಉಡುಗೊರೆ ನೀಡಿದರು. ಈ ಗ್ರಂಥಾಲಯ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಲಿ. ಇದರ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಲಿ ಎಂದು ಸಚಿವರು ಹಾರೈಸಿದರು.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…