Mysore
19
scattered clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ ಪ್ರಕರಣ: ಅಪರಿಚಿತ ಕಂಟೇನರ್‌ ಟ್ರಕ್‌ ವಿರುದ್ಧ ಹಿಟ್‌ ಅಂಡ್‌ ರನ್‌ ಕೇಸ್‌ ದಾಖಲು

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ಕಂಟೇನರ್‌ ಟ್ರಕ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕಾರು ಡ್ರೈವರ್‌ ಹಿಟ್‌ ಅಂಡ್‌ ರನ್‌ ಕೇಸ್‌ ದಾಖಲಿಸಿದ್ದಾರೆ.

ಇನ್ನು ಓವರ್‌ ಟೇಕ್‌ ಮಾಡುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತವಾಯ್ತಾ ಎಂಬ ಪ್ರಶ್ನೆ ಮೂಡಿದ್ದು, ಈ ಸಂಬಂಧ ಕಿತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಬೆಳಿಗ್ಗೆ 5 ಗಂಟೆ ಸಮಯದಲ್ಲಿ ಕಾರು ಅಪಘಾತ ಸಂಭವಿಸಿತ್ತು.

ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳು:
ನಾನು ಸಚಿವರ ಸರ್ಕಾರಿ ಕಾರು ಎಂ.01 977ನ್ನು ಚಲಾಯಿಸುತ್ತಿದ್ದೆ. ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಎಂಎಲ್‌ಸಿ ಚನ್ನರಾಜ್‌ ಹಟ್ಟಿಹೊಳಿ, ಸಚಿವರ ಅಂಗರಕ್ಷಕ ಈರಪ್ಪ ಕುಣಶಿಕಟ್ಟೆ ಇದ್ದರು. ಬೆಂಗಳೂರಿನಿಂದ ಬೆಳಗಾವಿಎ ಹೊರಟ್ಟಿದ್ದೆವು. ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಕ್ರಾಸ್‌ ಬಳಿಕ ಧಾರವಾಡ-ಬೆಳಗಾವಿ ಮಧ್ಯದ ರಾಷ್ಟ್ರೀಯ ಹೆದ್ದಾರಿ 48ರ ಮೇಲಿದ್ದೆವು. ನಮ್ಮ ಮುಂದೆ ಲೈನ್‌.1ರಲ್ಲಿ ಹೋಗುತ್ತಿದ್ದ ಕಂಟೇನರ್‌ ಟ್ರಕ್‌ ಚಾಲಕ ಯಾವುದೇ ಮುನ್ಸೂಚನೆ ಕೊಡದೇ ಎಡಬದಿಗೆ ಬಂದ. ಆ ಎಡಬದಿಗೆ ತೆಗೆದುಕೊಂಡರೂ ಟ್ರಕ್‌ ಚಾಲಕ ಕಾರಿನ ಬಲ ಬದಿಗೆ ತಾಗಿಸಿದ.

ಕಾರು ನಿಯಂತ್ರಣ ತಪ್ಪಿ ಸರ್ವಿಸ್‌ ರಸ್ತೆಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಗಂಭೀರ ಗಾಯಗಳಾಗಿವೆ. ಅಪಘಾತ ಮಾಡಿ ವಾಹನ ನಿಲ್ಲಿಸದೇ ಲಾರಿ ಡ್ರೈವರ್‌ ಹೋಗಿದ್ದಾನೆ ಎಂದು ದೂರು ದಾಖಲಿಸಲಾಗಿದೆ.

Tags:
error: Content is protected !!