ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕಾರು ಡ್ರೈವರ್ ಹಿಟ್ ಅಂಡ್ ರನ್ ಕೇಸ್ ದಾಖಲಿಸಿದ್ದಾರೆ.
ಇನ್ನು ಓವರ್ ಟೇಕ್ ಮಾಡುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತವಾಯ್ತಾ ಎಂಬ ಪ್ರಶ್ನೆ ಮೂಡಿದ್ದು, ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಬೆಳಿಗ್ಗೆ 5 ಗಂಟೆ ಸಮಯದಲ್ಲಿ ಕಾರು ಅಪಘಾತ ಸಂಭವಿಸಿತ್ತು.
ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳು:
ನಾನು ಸಚಿವರ ಸರ್ಕಾರಿ ಕಾರು ಎಂ.01 977ನ್ನು ಚಲಾಯಿಸುತ್ತಿದ್ದೆ. ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ, ಸಚಿವರ ಅಂಗರಕ್ಷಕ ಈರಪ್ಪ ಕುಣಶಿಕಟ್ಟೆ ಇದ್ದರು. ಬೆಂಗಳೂರಿನಿಂದ ಬೆಳಗಾವಿಎ ಹೊರಟ್ಟಿದ್ದೆವು. ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಕ ಧಾರವಾಡ-ಬೆಳಗಾವಿ ಮಧ್ಯದ ರಾಷ್ಟ್ರೀಯ ಹೆದ್ದಾರಿ 48ರ ಮೇಲಿದ್ದೆವು. ನಮ್ಮ ಮುಂದೆ ಲೈನ್.1ರಲ್ಲಿ ಹೋಗುತ್ತಿದ್ದ ಕಂಟೇನರ್ ಟ್ರಕ್ ಚಾಲಕ ಯಾವುದೇ ಮುನ್ಸೂಚನೆ ಕೊಡದೇ ಎಡಬದಿಗೆ ಬಂದ. ಆ ಎಡಬದಿಗೆ ತೆಗೆದುಕೊಂಡರೂ ಟ್ರಕ್ ಚಾಲಕ ಕಾರಿನ ಬಲ ಬದಿಗೆ ತಾಗಿಸಿದ.
ಕಾರು ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಗಂಭೀರ ಗಾಯಗಳಾಗಿವೆ. ಅಪಘಾತ ಮಾಡಿ ವಾಹನ ನಿಲ್ಲಿಸದೇ ಲಾರಿ ಡ್ರೈವರ್ ಹೋಗಿದ್ದಾನೆ ಎಂದು ದೂರು ದಾಖಲಿಸಲಾಗಿದೆ.
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…