ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಹಿಟ್ ಅಂಡ್ ರನ್ ಮಾಡಿ ಪರಾರಿಯಾಗಿರುವ ಹೊರ ರಾಜ್ಯದ ಕ್ಯಾಂಟರ್ ವಾಹನಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.
ಪಂಜಾಬ್ ಅಥವಾ ಹರಿಯಾಣದ ಕ್ಯಾಂಟರ್ ಎನ್ನುವ ಪ್ರಾಥಮಿಕ ಮಾಹಿತಿ ಬೆಳಗಾವಿ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದ್ದು, ಪೊಲೀಸರು 60 ಕ್ಯಾಂಟರ್ ವಾಹನಗಳ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೀರೇಬಾಗೇವಾಡಿ ಟೋಲ್‌ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ ವಿಡಿಯೋ ಆಧರಿಸಿ ಪೊಲೀಸರು ಈಗಾಗಲೇ 30 ಕ್ಯಾಂಟರ್ ವಾಹನಗಳನ್ನು ಕರೆಸಿ ವಿಚಾರಣೆ ಮಾಡಿದ್ದಾರೆ.
ಜನವರಿ.14ರ ಮುಂಜಾನೆ ಬೆಂಗಳೂರಿನಿಂದ ಬೆಳಗಾವಿಗೆ ಹಿಂತಿರುಗುತ್ತಿದ್ದಾಗ ಹೆಬ್ಬಾಳ್ಕರ್ ಕಾರು ಅಪಘಾತವಾಗಿತ್ತು. ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಈರಪ್ಪ ಹುಣಶಿಕಟ್ಟಿ ಮತ್ತು ಚಾಲಕ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಕ್ಯಾಂಟರ್‌ವೊಂದ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಗುಣಮುಖರಾಗಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…