ರಾಜ್ಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ ಪ್ರಕರಣ: ಕ್ಯಾಂಟರ್‌ಗಾಗಿ ತೀವ್ರ ಶೋಧ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಹಿಟ್‌ ಅಂಡ್‌ ರನ್‌ ಮಾಡಿ ಪರಾರಿಯಾಗಿರುವ ಹೊರ ರಾಜ್ಯದ ಕ್ಯಾಂಟರ್‌ ವಾಹನಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ಪಂಜಾಬ್‌ ಅಥವಾ ಹರಿಯಾಣದ ಕ್ಯಾಂಟರ್‌ ಎನ್ನುವ ಪ್ರಾಥಮಿಕ ಮಾಹಿತಿ ಬೆಳಗಾವಿ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದ್ದು, ಪೊಲೀಸರು 60 ಕ್ಯಾಂಟರ್‌ ವಾಹನಗಳ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೀರೇಬಾಗೇವಾಡಿ ಟೋಲ್‌ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ ವಿಡಿಯೋ ಆಧರಿಸಿ ಪೊಲೀಸರು ಈಗಾಗಲೇ 30 ಕ್ಯಾಂಟರ್‌ ವಾಹನಗಳನ್ನು ಕರೆಸಿ ವಿಚಾರಣೆ ಮಾಡಿದ್ದಾರೆ.

ಜನವರಿ.14ರ ಮುಂಜಾನೆ ಬೆಂಗಳೂರಿನಿಂದ ಬೆಳಗಾವಿಗೆ ಹಿಂತಿರುಗುತ್ತಿದ್ದಾಗ ಹೆಬ್ಬಾಳ್ಕರ್‌ ಕಾರು ಅಪಘಾತವಾಗಿತ್ತು. ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗನ್‌ ಮ್ಯಾನ್‌ ಈರಪ್ಪ ಹುಣಶಿಕಟ್ಟಿ ಮತ್ತು ಚಾಲಕ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಕ್ಯಾಂಟರ್‌ವೊಂದ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಗುಣಮುಖರಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

15 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago