ನಾವಗೆ ಕಾರ್ಖಾನೆ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದ ಯುವಕ
ಬೆಳಗಾವಿ: ಇತ್ತೀಚೆಗೆ ಸಂಭವಿಸಿದ ನಾವಗೆ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಮೃತಪಟ್ಟ ಮಾರ್ಕಂಡೇಯ ನಗರದ ಯುವಕ ಯಲ್ಲಪ್ಪ ಗುಂಡ್ಯಾಗೋಳ ಕುಟುಂಬಸ್ಥರನ್ನು ಇಂದು ಭೇಟಿ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ ಹೇಳಿದರು.
ಮೃತ ಯುವಕನ ಮನೆಗೆ ಭೇಟಿ ನೀಡಿದ ಸಚಿವರು, ತಂದೆ, ತಾಯಿಯನ್ನು ಸಂತೈಸಿ, ಧೈರ್ಯ ತುಂಬಿದರು. ಇಂಥ ಘಟನೆ ನಡೆದಿರುವುದು ದುರದೃಷ್ಟಕರ, ಈ ಘಟನೆ ನಡೆಯಬಾರದಿತ್ತು. ಮೃತ ಯಲ್ಲಪ್ಪ ಕ್ರಿಯಾಶೀಲ ವ್ಯಕ್ತಿಯಾಗಿದ್ದ, ಯುವಕನ ಕುಟುಂಬದೊಂದಿಗೆ ನಮ್ಮ ಕುಟುಂಬ ಸದಾ ಜೊತೆಗಿರುತ್ತದೆ ಎಂದು ಸಚಿವರು ಹೇಳಿದರು.
ಊಟ ತಿನ್ನಿಸಿದ ಸಚಿವರು
ಮೃತ ಯಲ್ಲಪ್ಪ ಅವರ ತಾಯಿಯ ರೋಧನೆಯನ್ನು ಕಂಡು ಕಣ್ಣೀರು ಹಾಕಿದ ಸಚಿವರು, ಅವರಿಗೆ ಸ್ವತಃ ಊಟ ತಿನ್ನಿಸುವ ಮೂಲಕ ಸಾಂತ್ವನ ಹೇಳಿದರು. ಸಾವು-ನೋವು ಎಲ್ಲವೂ ದೇವರ ಇಚ್ಛೆ, ಇದನ್ನ ತಡೀಯೋಕೆ ಯಾರಿಂದಲೂ ಸಾಧ್ಯವಿಲ್ಲ. ದೈನಂದಿನ ಕಾರ್ಯಗಳಲ್ಲಿ ತೊಡಗಿ ಎಂದು ಧೈರ್ಯ ತುಂಬಿದರು.
ನೀವು ಯಾವುದೇ ಕಾರಣದಿಂದ ಧೈರ್ಯ ಕಳೆದುಕೊಳ್ಳಬಾರದು. ಹೆಣ್ಣು ಮಕ್ಕಳಿಗೆ ಉತ್ತಮ ಭವಿಷ್ಯ ನೀಡಿ. ಅವರನ್ನು ಚೆನ್ನಾಗಿ ಬೆಳೆಸಿ ಎಂದು ಸಚಿವರು ತಂದೆ -ತಾಯಿಯರಲ್ಲಿ ವಿನಂತಿಸಿದರು.
ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…