ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು: ಬಾಲಭವನದ ಕಾರ್ಯಕ್ರಮಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬಾಲಭವನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಬಾಲಭವನದ ಕಾರ್ಯಕ್ರಮಗಳು ಇಲಾಖೆಯ ಮಕ್ಕಳ ಯಶಸ್ವಿ ಕಾರ್ಯಕ್ರಮಗಳಾಗಿದ್ದು, ಹಾಗಾಗಿ ಸರ್ಕಾರ ಮಕ್ಕಳಿಗಾಗಿ ರೂಪಿಸಿರುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಬೇಕೆಂದು ಸೂಚಿಸಿದರು.
ಇದೇ ವೇಳೆ ಬಾಲ ಭವನ ಅಧ್ಯಕ್ಞ ಬಿ.ಆರ್. ನಾಯ್ಡು ಮಾತನಾಡಿ, ಬಾಲಭವನದ ಕಾರ್ಯಕ್ರಮಗಳು ಕೊರೊನಾ ಕಾಲಾವಧಿಯಿಂದ ಸ್ಥಗಿತಗೊಂಡಿದ್ದವು. ಬಾಲಭವನ ಬೆಳೆವಣಿಗೆಗೆ ಹಾಗೂ ಮಕ್ಕಳ ಸರ್ವತೋಮುಖ ಬೆಳೆವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಯೋಜಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…