ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ವಿಳಂಬವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಾನು ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಮೂರು ತಿಂಗಳು ಯೋಜನೆ ಹಣ ಬಿಡುಗಡೆಗೆ ವಿಳಂಬವಾಗಿದೆ. ನಾನು ಕಾರ್ಯನಿರ್ವಹಿಸುತ್ತಿದ್ದಾಗ ಹಣಕಾಸು ಇಲಾಖೆಗೆ ಒತ್ತಡ ತಂದು ಹಣ ಬಿಡುಗಡೆ ಮಾಡಿಸುತ್ತಿದ್ದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು ಇನ್ನೊಂದು ವಾರ ಅಥವಾ 10 ದಿನಗಳಲ್ಲಿ ಗೃಹಲಕ್ಷ್ಮೀ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ನನಗೆ ಅಪಘಾತವಾಗಿ 40 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದೆ. ಹಾಗಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಹಾಕುವ ಪ್ರಕ್ರಿಯೆಯಲ್ಲಿ ಕೊಂಚ ವಿಳಂಬವಾಗಿದೆ. ಇನ್ನೊಂದು ವಾರದಲ್ಲಿ ಮೂರು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆ ಆಗಲಿದೆ ಎಂದು ಮಾಹಿತಿ ನೀಡಿದರು.





