ಬೆಂಗಳೂರು: ನನ್ನ ಕಾರು ಅಪಘಾತವಾದ ಬಳಿಕ ಚಾಲಕ ವೇಗವಾಗಿ ಕಾರು ಚಲಾಯಿಸುವುದಿಲ್ಲ. ಬೇಗ ಹೋಗು ಅಂದರೂ 30 ಕಿ.ಮೀ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಕಾರು ಚಲಾಯಿಸುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಕಾರಿನ ಅಪಘಾತದ ಬಗ್ಗೆ ನೆನಪಿಸಿಕೊಂಡು ಬೇಸರ ವ್ಯಕ್ತಪಡಿಸಿದರು.
ರಸ್ತೆ ಅಪಘಾತವಾದ ಮೇಲೆ ಇದು ನನ್ನ ಮೊದಲ ಕಾರ್ಯಕ್ರಮ. ಅಪಘಾತದ ಬಳಿಕ ನನ್ನ ಕಾರು ಚಾಲಕ 30ರ ಮೇಲೆ ಚಲಾಯಿಸುವುದಿಲ್ಲ ಎಂದರು.
ಇನ್ನು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಬಳಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿತ್ತು. ನಾಯಿ ಅಡ್ಡ ಬಂದಿದ್ದನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನುಮೂಳೆಗೆ ಬಲವಾದ ಪೆಟ್ಟು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಅವರು ಕಳೆದ ಒಂದೂವರೆ ತಿಂಗಳಿಗಿಂತ ಹೆಚ್ಚಿನ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…