ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ 63% ಕಮಿಷನ್ ಸರ್ಕಾರ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಶೋಕ್ ಅವರು ಅಜ್ಞಾನದಿಂದ ಬೇಜವಾಬ್ದಾರಿಯಿಂದ ಮಾತನಾಡಿದ್ದಾರೆ. ವಿಪಕ್ಷ ನಾಯಕರು ಚೆಕ್ ಮಾಡಿ ಮಾತನಾಡಬೇಕು. ಮಾಹಿತಿ ಪಡೆಯದೇ ಮಾತನಾಡಿ ಇಷ್ಟು ನಗೆ ಪಾಟಲಿಗೆ ಈಡಾಗಿದ್ದಾರೆ. ಬಿಜೆಪಿಯವರು ಎಷ್ಟು ಬೇಗ ವಿಪಕ್ಷ ನಾಯಕರನ್ನು ಬದಲಾವಣೆ ಮಾಡುತ್ತಾರೋ ಅಷ್ಟು ಒಳ್ಳೆಯದು. ಇಲ್ಲದಿದ್ದರೆ ವಿಪಕ್ಷವಾಗಿ ಉಳಿಯಬೇಕಾಗುತ್ತದೆ ಎಂದು ಭವಿಷ್ಯ ಹೇಳಿದರು.





