ವಿಜಯಪುರ: ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಮುರುಗೇಶ್ ನಿರಾಣಿ ವಿರುದ್ಧ ಕಿಡಿಕಾರಿದ್ದಾರೆ.
ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಸಚಿವ ಎಂ.ಬಿ.ಪಾಟೀಲ್ ಅವರು, ಅನವಶ್ಯಕವಾಗಿ ನನ್ನ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ, ಇಂದು ಮತ್ತು ಮುಂದೆಯೂ ಬಿಡಲ್ಲ. ಅದರ ಕಹಿ ಅನುಭವ ಈ ಹಿಂದೆ ನಿನಗೆ ಆಗಿದೆ ಎನ್ನುವುದ್ನು ನೆನಪಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಮಾಜಿ ಸಚಿವ ಮುರುಗೇಶ್ ನಿರಾಣಿಗೆ ನಾನು ದನ ಕಾಯುವವನು ಎಂಬ ಶಬ್ಧವನ್ನು ಎಲ್ಲಿಯೂ ಬಳಸಿಲ್ಲ. ಏಕವಚನದಲ್ಲೂ ನಾನು ಮಾತನಾಡಿಲ್ಲ. ಅಷ್ಟಕ್ಕೂ ದನ ಕಾಯುವುದು ಗೌರವದ ಕೆಲಸ. ದನಕಾಯುವವರನ್ನು ನಾನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.