ರಾಜ್ಯ

ಹೈಕಮಾಂಡ್‌ ವರದಿ ಕೇಳುವುದರಲ್ಲಿ ತಪ್ಪೇನಿಲ್ಲ: ಸಚಿವ ಸುಧಾಕರ್‌

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಎಲ್ಲಾ ಸಚಿವರ ಕಾರ್ಯವೈಖರಿ ಬಗ್ಗೆ ವರದಿ ಕೇಳಿದ್ದು, ನಾನು ಸಹ ನನ್ನ ಇಲಾಖೆ ವರದಿಯನ್ನು ನೀಡಿದ್ದೇನೆ ಅವರು ವರದಿ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಡಿ.4) ಹೈಕಮಾಂಡ್‌ನಿಂದ ಸಚಿವರ ವರದಿ ಕೇಳಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್‌ ಎಲ್ಲಾ ಇಲಾಖೆಯ ಸಚಿವರ ವರದಿ ಕೇಳಿದೆ. ವರದಿ ಪಡೆಯುವ ಅಧಿಕಾರ ಹೈಕಮಾಂಡ್‌ಗೆ ಇದೆ. ವರದಿ ನೀಡಿದ ಮೇಲೆ ಹೈಕಮಾಂಡ್‌ ನಾಯಕರು ಅದನ್ನು ಪರಿಶೀಲಿಸುತ್ತಾರೆ. ಹೀಗಾಗಿ ಹೈಕಮಾಂಡ್‌ ವರದಿ ಕೇಳಿರೋದರಲ್ಲಿ ಏನು ತಪ್ಪಿಲ್ಲ ಎಂದಿದ್ದಾರೆ.

ಪಕ್ಷದಿಂದ ಕೊಟ್ಟಿರೋ ಭರವಸೆಗಳನ್ನು ಈಡೇರಿಸಲು ಆಯಾಯ ಇಲಾಖೆಯಲ್ಲಿ ಜವಾಬ್ದಾರಿಯಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು ಶಾಸಕರಿಗೆ ಸಚಿವ ಸ್ಥಾನ ನೀಡಿರವುದು. ಅದನ್ನು ಬಿಟ್ಟು ಸಚಿವರು ಕಾರಿನಲ್ಲಿ ಓಡಾಡಿಕೊಂಡು ಇರುವುದಕ್ಕೆ ಅಲ್ಲ. ಕಾಂಗ್ರೆಸ್‌ ಪಕ್ಷದ ಹೆಸರು, ವರ್ಚಸ್ಸು ವೃದ್ದಿ ಮಾಡೋ ಜವಾಬ್ದಾರಿ ಶಾಸಕರು ಹಾಗೂ ಮಂತ್ರಿಗಳ ಮೇಲಿದೆ.ನಮಗೆ ನೀಡಿರುವ ಸಚಿವ ಸ್ಥಾನದ ಜವಾಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುತ್ತಿದ್ದಾರಾ ಅಥವಾ ಇಲ್ಲವಾ ಎಂದು ತಿಳಿಯಲು ವರದಿ ಕೇಳಿದ್ದಾರೆ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

11 mins ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

4 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

4 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

4 hours ago

ಓದುಗರ ಪತ್ರ; ಸಫಾರಿಗೆ ಅನುಮತಿ ಖಂಡನೀಯ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…

4 hours ago

ತಂಪಾದ ಕೊಡಗಿನಲ್ಲಿಯೂ ಹೆಚ್ಚುತ್ತಿದೆ ತಾಪ

ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…

4 hours ago