ರಾಜ್ಯ

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇದೊಂದು ಸಮತೋಲಿತ ಬಜೆಟ್ ಆಗಿದ್ದು, ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ವರನ್ನು ಒಳಗೊಂಡ ಚಾರಿತ್ರಿಕ 2026-27ನೇ ಸಾಲಿನ ಆಯವ್ಯಯ ರೂಪಿಸಲಾಗಿದೆ. ಬಜೆಟ್ನಲ್ಲಿ ಕೃಷಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದ್ದು, ರೈತರ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಕೆಗೆ ರೂ. 8373 ಕೋಟಿ ಮೀಸಲಿಡಲಾಗಿದ್ದು, ಬಡವರು ಜನಸಾಮಾನ್ಯರಿಗೆ ಇನ್ನಷ್ಟು ಶಕ್ತಿ ತುಂಬುವಂತಹ ಅತ್ಯಂತ ಕಡಿಮೆ ತೆರಿಗೆಯ ಬಜೆಟ್ ಇದಾಗಿದೆ. ಶಿಕ್ಷಣ, ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ, ನೀರಾವರಿ, ವಸತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಆಧ್ಯತೆ ನೀಡಿ ಅನುದಾನ ಮೀಸಲಿರಿಸುವುದು ಸ್ವಾಗತಾರ್ಹ. ಕೃಷಿ, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಕ್ಕೆ ಶೇಕಡಾ 13ರಷ್ಟು ಅನುದಾನ ಮೀಸಲಿರಿಸಿದೆ. ಎಲ್ಲಾ ಸಮಾಜಕ್ಕೂ ಬದುಕಿನ ಉನ್ನತೀಕರಣಕ್ಕೆ ಬೇಕಾಗುವಂತಹ ನೆರವು ಮತ್ತು ಪ್ರೋತ್ಸಾಹವನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಮಂಡಿಸಲಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

2 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

2 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

2 hours ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

2 hours ago

ಓದುಗರ ಪತ್ರ: ರಾಜ್ಯ ಬಜೆಟ್ ಪ್ರಗತಿಯ ದಿಕ್ಸೂಚಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…

2 hours ago

ಸರ್ವಜನ ಹಿತಕಾರಿ ಬಜೆಟ್

ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ  ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…

2 hours ago