ರಾಜ್ಯ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಸೂಚನೆ: ಸಚಿವ ಪರಮೇಶ್ವರ್‌

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸಲಹೆ ನೀಡಲಾಗಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಪೊಲೀಸ್ ಇಲಾಖೆಗೆ ಸವಾಲಿನ ಪರಿಸ್ಥಿತಿ ಎದುರಾಗಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಶಿವಾನಂದ ಪಾಟೀಲ್ ಅವರ ಜೊತೆ ನಿನ್ನೆ ಕೂಡ ತಾವು ಚರ್ಚೆ ನಡೆಸಿದ್ದು, ಆದಷ್ಟು ಶೀಘ್ರ ಸಮಸ್ಯೆ ಬಗೆಹರಿಸಿ ಎಂದು ಸಲಹೆ ನೀಡಿದ್ದೇನೆ. ಕಬ್ಬು ಬೆಲೆ ನಿಯಂತ್ರಣ ಅಥವಾ ದರ ನಿಗದಿಗೆ ಸಂಬಂಧಪಟ್ಟಂತೆ ಶೀಘ್ರ ತೀರ್ಮಾನ ತೆಗೆದುಕೊಳ್ಳಬೇಕು. ರೈತರ ಪ್ರತಿಭಟನೆ ಮುಂದುವರೆದರೆ ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಕಷ್ಟವಾಗುತ್ತದೆ ಎಂದಿದ್ದಾರೆ.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಸೇರಿ ಸಕ್ಕರೆ ಕಾರ್ಖಾನೆಗಳ ಬಗ್ಗೆ ಮಾತುಕತೆ ನಡೆಸಿ ಸಮಸ್ಯೆ ಬಗೆ ಹರಿಸುವುದಾಗಿ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ. ನಿನ್ನೆ ಕಬ್ಬು ಬೆಳೆಗಾರರೊಬ್ಬರು ವಿಷ ಕುಡಿಯಲು ಪ್ರಯತ್ನಿಸಿದರು. ಪೊಲೀಸರು ತಕ್ಷಣವೇ ಮಧ್ಯ ಪ್ರವೇಶಿಸಿ ರಕ್ಷಿಸಿದ್ದಾರೆ. ಮುಂದೆ? ಈ ರೀತಿ ಘಟನೆಗಳಾಗುವುದು ಸವಾಲಿನ ಪರಿಸ್ಥಿತಿಯನ್ನು ನಿರ್ಮಿಸಲಿದೆ ಎಂದರು.

ಬಿಜೆಪಿಯವರು ಇಂತಹ ಪರಿಸ್ಥಿತಿಗಾಗಿಯೇ ಕಾಯುತ್ತಿರುತ್ತಾರೆ. ಹೀಗಾಗಿ ಅವರು ರಾಜಕಾರಣ ಮಾಡುವುದು ಸಹಜ. ಆದರೆ ಅವರು ಅಧಿಕಾರದಲ್ಲಿದ್ದಾಗ ಯಾವ ಪರಿಸ್ಥಿತಿ ಇತ್ತು ಎಂಬುದನ್ನು ಸರಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಇದನ್ನು ಓದಿ: ಕುರ್ಚಿ ಬಡಿದಾಟ ಬದಿಗೊತ್ತಿ, ಕಬ್ಬು ಬೆಳೆಗಾರದ ಸಮಸ್ಯೆ ಬಗೆಹರಿಸಿ: ಬಿ.ವೈ.ವಿಜಯೇಂದ್ರ

ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರು ಮನೆಗೆಲಸದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತಮ ಗಮನಕ್ಕೆ ಬಂದಿದೆ. ನಿಖರವಾದ ವರದಿ ನೀಡುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ಬಳಿಕ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್‍ರಚನೆ ಸೇರಿದಂತೆ ಯಾವುದೇ ಬೆಳವಣಿಗೆಗಳಾದರೂ ಹೈಕಮಾಂಡ್ ತೀರ್ಮಾನವೇ ಅಂತಿಮ. ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಗಳನ್ನು ನಾವು ಅನುಸರಿಸುತ್ತೇವೆ. ಒಂದು ವೇಳೆ ಧಿಕ್ಕರಿಸಿದರೆ ಅಂಥವರ ವಿರುದ್ಧ ಕ್ರಮಗಳಾದ ಉದಾಹರಣೆಗಳಿವೆ ಎಂದರು.

ಕಾಂಗ್ರೆಸ್ ಹೈಕಮಾಂಡ್ ಸಂಸ್ಕೃತಿಯ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಈಗ ಅವರಲ್ಲೂ ಕೂಡ ಹೈಕಮಾಂಡ್ ಸಂಸ್ಕೃತಿ ತೀವ್ರವಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸಮರ್ಥನೀಯ ಎಂದರು.

ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಮನೆಯಲ್ಲಿ ಮುಖ್ಯಮಂತ್ರಿ ಅವರು ಊಟಕ್ಕೆ ಸೇರುವುದರಲ್ಲಿ ವಿಶೇಷವೇನಿಲ್ಲ. ಮುಖ್ಯಮಂತ್ರಿ ಅವರು ತುಮಕೂರಿಗೆ ಬಂದಾಗ ರಾಜಣ್ಣ ಅವರ ಮನೆಯಲ್ಲಿ ಊಟ ಮಾಡುವುದು ಮೊದಲಿನಿಂದಲೂ ಸಂಪ್ರದಾಯವಾಗಿದೆ. ನಾವು ಕೂಡ ಊಟಕ್ಕೆ ಹೋಗುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

11 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

13 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

13 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

13 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

14 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

14 hours ago