ರಾಜ್ಯ

ದರ್ಶನ್ ಗೆ ಯಾವ ಬಿರಿಯಾನಿ ನೀಡ್ತಿಲ್ಲ ಬೇಕಿದ್ರೆ ಬನ್ನಿ ಕರ್ಕೊಂಡು ಹೋಗಿ ತೋರಿಸ್ತೀನಿ ; ಗೃಹ ಸಚಿವ

ಬೆಂಗಳೂರು : ಜೈಲಿನಲ್ಲಿರುವ ದರ್ಶನ್‌ ಗೆ ಯಾವ ಬಿರಿಯಾನಿ ನೀಡ್ತಿಲ್ಲ. ಅದನ್ನ ಅವತ್ತೆ ಸ್ಪಷ್ಟಪಡಿಸಿದ್ದೇನೆ. ಅಗತ್ಯವಿದ್ರೆ ನನ್ನ ಜೊತೆ ಬನ್ನಿ ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಹೇಳಿದ್ದಾರೆ.

ಜೈಲು ಸೇರಿರುವ ನಟ ದರ್ಶನ್‌ ಗೆ ವಿಶೇಷ ಸತ್ಕಾರ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಗೃಹಸಚಿವರು, ದರ್ಶನ್‌ ಗೆ ಯಾವುದೇ ರೀತಿಯ ವಿಶೇಷವಾದ ಸತ್ಕಾರ ಕೊಡುತ್ತಿಲ್ಲ.ಜೈಲಿನ ಒಳಗೂ ಬಿರಿಯಾನಿ ಕೊಡುತ್ತಿಲ್ಲ ಈ ಬಗ್ಗೆ ಅಂದೇ ಸ್ಪಷ್ಟನೆ ಕೊಟ್ಟಿದ್ದೇನೆ. ಬೇಕಾದರೆ ಬನ್ನಿ ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಆರೋಪ ನಿರಾಕರಿಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

46 mins ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

2 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

4 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

4 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

4 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

4 hours ago