ಬೆಂಗಳೂರು: ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.
ಯುವ ಗುತ್ತಿಗೆದಾರ ಸಚಿನ್ ಡಿಸೆಂಬರ್.26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ನನ್ನ ಸಾವಿಗೆಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ ಸೇರಿದಂತೆ ಎಂಟು ಜನರು ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದರು.
ಜೊತೆಗೆ ಬಿಜೆಪಿಯ ನಾಯಕರ ಕೊಲೆಗೆ ಸಂಚು ರೂಪಿಸಿದ್ದರು ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದರು. ಈ ಸಂಬಂಧ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದ ಬಳಿಕ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ಬಿಜೆಪಿಯ ಕಲಬುರಗಿ ಮತ್ತು ಬೀದರ್ ನಿಯೋಗ ಸಚಿನ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿತ್ತು. ಇದರ ಜೊತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸಚಿವ ಪ್ರಿಯಾಂಕ್ ಖರ್ಗೆ ಈಗ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕು ಎಂದು ಸಿಎಂ ಸಿದ್ದುಗೆ ಮನವಿ ಮಾಡಿದ್ದಾರೆ.





