ರಾಜ್ಯ

ಗ್ರಾಮೀಣ ಜನರಿಗೆ ಮಾಹಿತಿ ನೀಡಲು ಗ್ರಾಮದನಿ ಪಾಡ್‌ಕಾಸ್ಟ್‌  ಲೋಕಾರ್ಪಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ‌ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, ಸರ್ಕಾರಿ ಪಾರಿಭಾಷಿಕ ಪದಗಳನ್ನು ಸರಳೀಕರಣ ಮಾಡಿ ಜನಸಾಮಾನ್ಯರಿಗೆ ಅರ್ಥೈಸುವ ನಿಟ್ಟಿನಲ್ಲಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಕಾರ್ಯ ನಿರ್ವಹಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕರ್ನಾಟಕದ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಯು (ANSSIRDPR) ಹೊಸಹೆಜ್ಜೆ ಇಡುವುದರೊಂದಿಗೆ ಆರಂಭಿಸಿರುವ  ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪಲಿರುವ ‘ಗ್ರಾಮದನಿ’ ಸರಣಿ ಪಾಡ್‌ಕಾಸ್ಟ್‌ ಲೋಕಾರ್ಪಣೆ ಮಾಡಿ ಸಚಿವರು ಮಾತನಾಡಿದರು.
ಮಾಧ್ಯಮದ ಇಂದಿನ ಯುಗದಲ್ಲಿ, ಸಮುದಾಯಕ್ಕೆ ಮಾಹಿತಿ ಮತ್ತು ಅರಿವು ಮೂಡಿಸುವುದು, ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ,  ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ, ತಂತ್ರಜ್ಞಾನದ ಸಮರ್ಪಕ ಬಳಕೆ ನೆರವಾಗಬಲ್ಲದು ಎಂದು ಹೇಳಿದ ಸಚಿವರು ‘ಗ್ರಾಮದನಿ’ ಅಕ್ಷರಶಃ ‘ಗ್ರಾಮೀಣ ಕರ್ನಾಟಕದ ಧ್ವನಿ’ಯಾಗಲಿದ್ದು,  ಇದು ಕೇವಲ ಮಾಹಿತಿ ನೀಡುವ ವೇದಿಕೆಯಾಗಿರದೆ  ಶಕ್ತಿಯುತ ಅರಿವಿನ ಮಾಧ್ಯಮವಾಗಲಿದೆ ಎಂದು ಅಭಿಪ್ರಾಯ ಪಟ್ಟರು.
ಸಾಮರ್ಥ್ಯಾಭಿವೃದ್ಧಿ ಮತ್ತು ಜ್ಞಾನಾರ್ಜನೆ ಈ ಪಾಡ್‌ಕಾಸ್ಟ್ ನ ಪ್ರಮುಖ ಉದ್ದೇಶಗಳಾಗಿದ್ದು, ಪ್ರಮುಖವಾಗಿ ಚುನಾಯಿತ ಪ್ರತಿನಿಧಿಗಳು, ಕ್ಷೇತ್ರ ಸಿಬ್ಬಂದಿಗಳು/ ಅಧಿಕಾರಿಗಳು ಹಾಗೂ ಜನಸಾಮಾನ್ಯರ ಸಾಮರ್ಥ್ಯವನ್ನು ವೃದ್ಧಿಸಲು ಮತ್ತು ಅವರಿಗೆ ಅಗತ್ಯವಾದ ಜ್ಞಾನವನ್ನು ಸುಲಭವಾಗಿ ತಲುಪಿಸಲು ಇದು ಸೂಕ್ತ ವೇದಿಕೆಯಾಗಲಿದೆ; ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳಿಗೆ ಸಂಬಂಧಿಸಿದ ನಿಯಮಗಳು, ಒಟ್ಟಾರೆ ಪಂಚಾಯತ್‌ ವ್ಯವಸ್ಥೆಯ  ಡಿಜಿಟಲೀಕರಣ ಕುರಿತ ಮಾರ್ಗಸೂಚಿಗಳು, ಪಂಚತಂತ್ರ 2.0 ತಂತ್ರಾಂಶದಲ್ಲಿ ಇಂದೀಕರಿಸುವ ವಿಧಾನ ಮುಂತಾದ ಹಲವು ಉಪಯುಕ್ತ ಸುತ್ತೋಲೆಗಳು ಮತ್ತು ಮಾರ್ಗಸೂಚಿಗಳನ್ನು ಇಲ್ಲಿ ಪ್ರಸಾರ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
‘ಗ್ರಾಮದನಿ’ ಪಾಡ್‌ಕಾಸ್ಟ್‌ ಸರಣಿಯು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಪ್ರಸಾರ ಮಾಡುವ ಮತ್ತು ಆಡಳಿತ ಸುಧಾರಣೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಿದೆ ಎಂದು ಎಂದೂ ಸಚಿವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿ ಡಿ.ರಣದೀಪ್‌, ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಹಾಗೂ ಅಧಿಕಾರಿಗಳು ಇದ್ದರು.
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

4 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

4 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

4 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

4 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

4 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

4 hours ago