ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನು ಓದಿ: ಪ್ರಿಯಾಂಕ ಖರ್ಗೆಗೆ ಬೆದರಿಕೆ : ಸರ್ಕರ ಗಂಭೀರವಾಗಿ ಪರಿಗಣಿಸಿದೆ ಎಂದ ಹೋಂ ಮಿನಿಸ್ಟರ್
ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ವ್ಯಕ್ತಿಯೋರ್ವ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದು, ದಾನೇಶ್ ನರೋಣ ಎಂಬಾತನನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಇನ್ನು ನಿನ್ನೆಯಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಅವರು, ನನಗೆ ಬೆದರಿಕೆ ಕರೆ ಬರುತ್ತಿದೆ ಬೆದರಿಕೆ ಕರೆಯ ವಿಡಿಯೋ ರಿಲೀಸ್ ಮಾಡಿದ್ದರು.




