ರಾಜ್ಯ

ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಬೆಂಗಳೂರು: ಬಿಜೆಪಿಯವರು ಪ್ರತಿಯೊಂದು ಪ್ರಕರಣವನ್ನು ಸಿಬಿಐಗೆ ಕೊಡಿ ಎನ್ನುತ್ತಾರೆ. ಸ್ವತಃ ಸಿಬಿಐ ಅವರೇ ನೀವು ನಮಗೆ ಕೇಸ್ ಕೊಡಬೇಡಿ ಎಂದು ಪತ್ರ ಬರೆದಿದ್ದಾರೆ. ಅದು ಬಿಜೆಪಿಯವರಿಗೆ ಮರೆತು ಹೋಗಿರಬಹುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.6) ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ವಹಿಸುವಂತೆ ಬಿಜೆಪಿ ಆಗ್ರಹದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಹನಿಟ್ರ್ಯಾಪ್‌ ವಿಚಾರ ಸೇರಿದಂತೆ ಪ್ರತಿಯೊಂದು ಪ್ರಕರಣವನ್ನು ಸಿಬಿಐ ಕೊಡಿ ಎಂದು ಹೇಳುತ್ತಾರೆ. ಅಂತೆಯೇ ಇದನ್ನು ಸಿಬಿಐಗೆ ಕೊಡಿ ಎಂದು ಕೇಳುತ್ತಿದ್ದಾರೆ. ಆದರೆ ಸಿಬಿಐ ಅವರೇ ನೀವು ನಮಗೆ ಕೇಸ್ ಕೊಡಬೇಡಿ ಎಂದು ಪತ್ರ ಬರೆದಿದ್ದಾರೆ. ಒಂದು ವೇಳೆ ನೀವೂ ನಮಗೆ ಕೇಸ್ ನೀಡಿದರೆ ಅದಕ್ಕೆ ಸಿಬ್ಬಂದಿ ಒದಗಿಸಬೇಕು. ಸಾರಿಗೆ ವ್ಯವಸ್ಥೆ ಮಾಡಿ ಅದರ ಶುಲ್ಕವನ್ನು ನೀವೇ ಪಾವತಿಸಬೇಕು. ಅಲ್ಲದೇ ನಾವು ಸ್ವತಂತ್ರವಾಗಿ ತನಿಖೆ ಮಾಡಲು ಆಗುವುದಿಲ್ಲ, ಕರ್ನಾಟಕ ಪೊಲೀಸರ ಸಹಾಯ ಪಡೆದೇ ತನಿಖೆ ನಡೆಸುತ್ತೇವೆ. ಎಂದು ಬರೆದಿದ್ದಾರೆ. ಅದನ್ನು ಬಿಜೆಪಿಯವರು ಮರೆತುಬಿಟ್ಟಿದ್ದಾರೆಂದು ಕಾಣುತ್ತದೆ ಹಾಗಾಗಿ ಅವರಿಗೆ ಪತ್ರ ತಲುಪಿಸಿ ಕೊಡುತ್ತೇನೆ ಎಂದು ಟಾಂಗ್‌ ನೀಡಿದ್ದಾರೆ.

ಬಿಜೆಪಿಯವರಿಗೆ ಸಾವಿನ ಮನೆಯಲ್ಲಿ ರಾಜಕೀಯ ಮಾಡಿ ಅಭ್ಯಾಸವಾಗಿದೆ. ಅವರು ಪ್ರಕರಣದ ಸತ್ಯಾಂಶವನ್ನು ನೋಡುವುದಿಲ್ಲ. ಸುಮ್ಮನೆ ದುರುದ್ದೇಶದಿಂದ ರಾಜಕೀಯ ಮಾಡುತ್ತಾರೆ. ಇದೇ ರಾಜಕೀಯವನ್ನು ಕಲಬುರ್ಗಿಯಲ್ಲಿ ಮಾಡಿದ್ದಾರೆ. ವಿನಯ್‌ ಡೆತ್‌ನೋಟ್‌ನಲ್ಲಿ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂಥರ್‌ ಗೌಡ ಹೆಸರಿದೆಯಾ? ಅದು ವಾಟ್ಸ್‌ಆಪ್‌ ಸಂದೇಶನಾ? ಇವರು ಸುಮ್ಮನೆ ಹೈಕಮಾಂಡ್ ಮನವೊಲಿಸಲು ಹಾಗೂ ಇವರ ಅಸ್ತಿತ್ವ ತೋರಿಸಿಕೊಳ್ಳಲು ಮಾಡುತ್ತಿದ್ದಾರೆ. ಇಲ್ಲಿಯವರೆಗೂ ಯಾವುದೇ ಕೇಸ್ ಸಾಬೀತಾಗಿಲ್ಲ. ಯಾವುದಾದರೂ ಒಂದು ಕೇಸ್ ಅನ್ನು ಸಾಬೀತು ಮಾಡಿದ್ದಾರಾ? ಬಿಜೆಪಿಯವರು ಯಾರು ಕಾಳಜಿ ವಹಿಸಿದ್ದಾರೆ. ನೂರಾರು ಕಾರ್ಯಕರ್ತರ ಪಟ್ಟಿಗೆ ಈ ಹೆಸರು ಒಂದು ಸೇರ್ಪಡೆಯಾಗಿದೆ. ಬಿಜೆಪಿಯವರ ರಾಜಕೀಯ ಅಸ್ತಿತ್ವವೇ ಇಷ್ಟು ಎಂದು ವಾಗ್ದಾಳಿ ನಡೆಸಿದ್ದಾರೆ.

AddThis Website Tools
ಅರ್ಚನ ಎಸ್‌ ಎಸ್

Recent Posts

ಸಾಲಗಾರರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆನರಾ ಬ್ಯಾಂಕ್‌

ನವದೆಹಲಿ: ಕೆನರಾ ಬ್ಯಾಂಕ್‌ ಇಂದು ತನ್ನ ರೆಪೊ-ಲಿಂಕ್ಡ್‌ ಸಾಲ ದರವನ್ನು 25 ಬೇಸಿಸ್‌ ಪಾಯಿಂಟ್‌ಗಳಿಂದ ಕಡಿಮೆ ಮಾಡುವ ಮೂಲಕ ಸಾಲಗಾರರಿಗೆ…

8 hours ago

ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡ ಇಡಿ ವಶಕ್ಕೆ

ಬೆಂಗಳೂರು: ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಹಾಗೂ ಶಾಸಕ ವಿನಯ್‌ ಕುಲಕರ್ಣಿ ಅವರ ಮನೆಗಳ ಮೇಲೆ ಇಡಿ…

8 hours ago

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ: ದೆಹಲಿಯಲ್ಲಿ ಸರ್ವ ಪಕ್ಷ ಸಭೆ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌…

9 hours ago

ಮಾನವ-ವನ್ಯಜೀವಿ ಸಂಘರ್ಷ ತಡೆಗೆ 157 ಕೋಟಿ. ರೂ. ಅನುಮೋದನೆ: ಸಚಿವ ಈಶ್ವರ್ ಖಂಡ್ರೆ

ಹನೂರು: ಕಾವೇರಿ ವನ್ಯಜೀವಿ ಧಾಮ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಅರಣ್ಯದ ಸುತ್ತಮುತ್ತ ಮಾನವ- ವನ್ಯಜೀವಿ…

9 hours ago

ಮೇ.1ರಿಂದ ಜೋಗ ಜಲಪಾತ ವೀಕ್ಷಣೆಗೆ ಮುಕ್ತ

ಶಿವಮೊಗ್ಗ: ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಮೇ.1ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ…

9 hours ago

ಕಾವೇರಿ ಆರತಿಗೆ 92 ಕೋಟಿ ರೂ. ಅನುದಾನ: ಸಿಎಂಗೆ ಅಭಿನಂದನೆ ಸಲ್ಲಿಸಿದ ಶಾಸಕ ದಿನೇಶ್ ಗೂಳಿಗೌಡ

ಮಂಡ್ಯ: ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ…

9 hours ago