ರಾಜ್ಯ

ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಬೆಂಗಳೂರು: ಬಿಜೆಪಿಯವರು ಪ್ರತಿಯೊಂದು ಪ್ರಕರಣವನ್ನು ಸಿಬಿಐಗೆ ಕೊಡಿ ಎನ್ನುತ್ತಾರೆ. ಸ್ವತಃ ಸಿಬಿಐ ಅವರೇ ನೀವು ನಮಗೆ ಕೇಸ್ ಕೊಡಬೇಡಿ ಎಂದು ಪತ್ರ ಬರೆದಿದ್ದಾರೆ. ಅದು ಬಿಜೆಪಿಯವರಿಗೆ ಮರೆತು ಹೋಗಿರಬಹುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.6) ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ವಹಿಸುವಂತೆ ಬಿಜೆಪಿ ಆಗ್ರಹದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಹನಿಟ್ರ್ಯಾಪ್‌ ವಿಚಾರ ಸೇರಿದಂತೆ ಪ್ರತಿಯೊಂದು ಪ್ರಕರಣವನ್ನು ಸಿಬಿಐ ಕೊಡಿ ಎಂದು ಹೇಳುತ್ತಾರೆ. ಅಂತೆಯೇ ಇದನ್ನು ಸಿಬಿಐಗೆ ಕೊಡಿ ಎಂದು ಕೇಳುತ್ತಿದ್ದಾರೆ. ಆದರೆ ಸಿಬಿಐ ಅವರೇ ನೀವು ನಮಗೆ ಕೇಸ್ ಕೊಡಬೇಡಿ ಎಂದು ಪತ್ರ ಬರೆದಿದ್ದಾರೆ. ಒಂದು ವೇಳೆ ನೀವೂ ನಮಗೆ ಕೇಸ್ ನೀಡಿದರೆ ಅದಕ್ಕೆ ಸಿಬ್ಬಂದಿ ಒದಗಿಸಬೇಕು. ಸಾರಿಗೆ ವ್ಯವಸ್ಥೆ ಮಾಡಿ ಅದರ ಶುಲ್ಕವನ್ನು ನೀವೇ ಪಾವತಿಸಬೇಕು. ಅಲ್ಲದೇ ನಾವು ಸ್ವತಂತ್ರವಾಗಿ ತನಿಖೆ ಮಾಡಲು ಆಗುವುದಿಲ್ಲ, ಕರ್ನಾಟಕ ಪೊಲೀಸರ ಸಹಾಯ ಪಡೆದೇ ತನಿಖೆ ನಡೆಸುತ್ತೇವೆ. ಎಂದು ಬರೆದಿದ್ದಾರೆ. ಅದನ್ನು ಬಿಜೆಪಿಯವರು ಮರೆತುಬಿಟ್ಟಿದ್ದಾರೆಂದು ಕಾಣುತ್ತದೆ ಹಾಗಾಗಿ ಅವರಿಗೆ ಪತ್ರ ತಲುಪಿಸಿ ಕೊಡುತ್ತೇನೆ ಎಂದು ಟಾಂಗ್‌ ನೀಡಿದ್ದಾರೆ.

ಬಿಜೆಪಿಯವರಿಗೆ ಸಾವಿನ ಮನೆಯಲ್ಲಿ ರಾಜಕೀಯ ಮಾಡಿ ಅಭ್ಯಾಸವಾಗಿದೆ. ಅವರು ಪ್ರಕರಣದ ಸತ್ಯಾಂಶವನ್ನು ನೋಡುವುದಿಲ್ಲ. ಸುಮ್ಮನೆ ದುರುದ್ದೇಶದಿಂದ ರಾಜಕೀಯ ಮಾಡುತ್ತಾರೆ. ಇದೇ ರಾಜಕೀಯವನ್ನು ಕಲಬುರ್ಗಿಯಲ್ಲಿ ಮಾಡಿದ್ದಾರೆ. ವಿನಯ್‌ ಡೆತ್‌ನೋಟ್‌ನಲ್ಲಿ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂಥರ್‌ ಗೌಡ ಹೆಸರಿದೆಯಾ? ಅದು ವಾಟ್ಸ್‌ಆಪ್‌ ಸಂದೇಶನಾ? ಇವರು ಸುಮ್ಮನೆ ಹೈಕಮಾಂಡ್ ಮನವೊಲಿಸಲು ಹಾಗೂ ಇವರ ಅಸ್ತಿತ್ವ ತೋರಿಸಿಕೊಳ್ಳಲು ಮಾಡುತ್ತಿದ್ದಾರೆ. ಇಲ್ಲಿಯವರೆಗೂ ಯಾವುದೇ ಕೇಸ್ ಸಾಬೀತಾಗಿಲ್ಲ. ಯಾವುದಾದರೂ ಒಂದು ಕೇಸ್ ಅನ್ನು ಸಾಬೀತು ಮಾಡಿದ್ದಾರಾ? ಬಿಜೆಪಿಯವರು ಯಾರು ಕಾಳಜಿ ವಹಿಸಿದ್ದಾರೆ. ನೂರಾರು ಕಾರ್ಯಕರ್ತರ ಪಟ್ಟಿಗೆ ಈ ಹೆಸರು ಒಂದು ಸೇರ್ಪಡೆಯಾಗಿದೆ. ಬಿಜೆಪಿಯವರ ರಾಜಕೀಯ ಅಸ್ತಿತ್ವವೇ ಇಷ್ಟು ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

3 hours ago