Mysore
22
light rain

Social Media

ಸೋಮವಾರ, 23 ಫೆಬ್ರವರಿ 2026
Light
Dark

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸಾರಿಗೆ ಬಸ್‌ಗಳ ಟಿಕೆಟ್‌ ದರ ಹೆಚ್ಚಳ ಬಗ್ಗೆ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.

ಟಿಕೆಟ್‌ ದರ ಪರಿಷ್ಕರಣೆಗಾಗಿ ಪ್ರತ್ಯೇಕ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ. ಈ ಸಮಿತಿ ಸಾರಿಗೆ ಸಂಸ್ಥೆಗಳ ಕಾಲಕಾಲದ ಖರ್ಚು ವೆಚ್ಚ ಮತ್ತು ಡೀಸೆಲ್‌ ಬೆಲೆ ಏರಿಕೆಯಂತಹ ಮಾನದಂಡ ಆಧರಿಸಿ ದರ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಸದ್ಯಕ್ಕೆ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆಗಾಗ ಅಲ್ಪ ಪ್ರಮಾಣದಲ್ಲಿ ಟಿಕೆಟ್‌ ದರ ಏರಿಕೆ ಮಾಡಿದಲ್ಲಿ ಜನರಿಗೂ ಹೊರೆಯಾಗುವುದಿಲ್ಲ ಎಂದು ಹೇಳಿದರು.

Tags:
error: Content is protected !!