ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸಾರಿಗೆ ಬಸ್‌ಗಳ ಟಿಕೆಟ್ ದರ ಹೆಚ್ಚಳ ಬಗ್ಗೆ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.
ಟಿಕೆಟ್ ದರ ಪರಿಷ್ಕರಣೆಗಾಗಿ ಪ್ರತ್ಯೇಕ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ. ಈ ಸಮಿತಿ ಸಾರಿಗೆ ಸಂಸ್ಥೆಗಳ ಕಾಲಕಾಲದ ಖರ್ಚು ವೆಚ್ಚ ಮತ್ತು ಡೀಸೆಲ್ ಬೆಲೆ ಏರಿಕೆಯಂತಹ ಮಾನದಂಡ ಆಧರಿಸಿ ದರ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಸದ್ಯಕ್ಕೆ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆಗಾಗ ಅಲ್ಪ ಪ್ರಮಾಣದಲ್ಲಿ ಟಿಕೆಟ್ ದರ ಏರಿಕೆ ಮಾಡಿದಲ್ಲಿ ಜನರಿಗೂ ಹೊರೆಯಾಗುವುದಿಲ್ಲ ಎಂದು ಹೇಳಿದರು.
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…