Mysore
19
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಹಲ್ಲೆಗೊಳಗಾದ ಕಂಡಕ್ಟರ್‌ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗರೆಡ್ಡಿ

ಬೆಳಗಾವಿ: ಕನ್ನಡದಲ್ಲಿ ಮಾತನಾಡಿ ಎಂಬ ಹೇಳಿಕೆ ವಿಚಾರವಾಗಿ ಹಲ್ಲೆಗೊಳಗಾದ ಬಸ್‌ ನಿರ್ವಾಹಕ ಮಹದೇವಪ್ಪ ಅವರನ್ನು ಸಚಿವ ರಾಮಲಿಂಗರೆಡ್ಡಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಬಸ್‌ ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದರು.

ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರ್ವಾಹಕ ಮಹದೇವಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಎರಡು ದಿನಗಳ ನಂತರ ಅವರು ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಿದರು.

ಕಂಡಕ್ಟರ್‌ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕಬೇಕು. ಇನ್ನು ಕಂಡಕ್ಟರ್‌ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ದಾಖಲಿಸುವಾಗ ಪೊಲೀಸರು ಕನಿಷ್ಠ ಜ್ಞಾನವನ್ನು ಬಳಸಿಲ್ಲ. ಈ ಪ್ರಕರಣ ಸಂಬಂಧ ಗೃಹ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು.

ಇನ್ನು ಎರಡು ರಾಜ್ಯಗಳ ನಡುವಿನ ಬಸ್‌ ಸಂಚಾರ ಸ್ಥಗಿತದಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಇದರಿಂದ ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿದ್ದಾವೆ. ಹಾಗೆಯೇ ನಮ್ಮ ಬಸ್‌ಗೆ ಹಾನಿ ಮಾಡಿದವರ ವಿರುದ್ಧ ಕ್ರಮಕ್ಕೆ ಅಲ್ಲಿನ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

Tags:
error: Content is protected !!