ಬೆಂಗಳೂರು: ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಮುಂದೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾರ್ಚ್.7ರಂದು ರಾಜ್ಯ ಬಜೆಟ್ ಮಂಡನೆಯಾದ ಬಳಿಕ ಕೆಲ ಸಚಿವರು ಖಾತೆ ಬದಲಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯರ ಬಳಿ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.
ಈ ಸಚಿವರ ಸಾಲಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಹ ಇದ್ದು, ಶಕ್ತಿ ಯೋಜನೆ ಹೊಡೆತದಲ್ಲಿ ಇಲಾಖೆಯ ಅಭಿವೃದ್ಧಿ ಕಷ್ಟವಾಗಿದೆ. ಆದ್ದರಿಂದ ಬೇರೆ ಯಾವುದಾದರೂ ಖಾತೆ ಕೊಟ್ಟರೆ ಓಕೆ ಎಂದು ಮನವಿ ಮಾಡಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಬಜೆಟ್‌ನಲ್ಲಿ ಸಾರಿಗೆ ಇಲಾಖೆಗೆ ನಿರೀಕ್ಷಿತ ಅನುದಾನ ಇಲ್ಲದಿರುವುದು ಹಾಗೂ ಶಕ್ತಿ ಯೋಜನೆಯ ಆರ್ಥಿಕ ಹೊಡೆತ ಇಲಾಖೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಗೆ ಬೇಸರ ಮೂಡಲು ಕಾರಣ ಎನ್ನಲಾಗುತ್ತಿದೆ.
ಈ ಬೆಳವಣಿಗೆಗಳ ನಡುವೆ ಸಚಿವ ರಾಮಲಿಂಗಾರೆಡ್ಡಿ ಅವರು, ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದು, ಖಾತೆ ಬದಲಾವಣೆ ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.