ರಾಜ್ಯ

ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು: ಹಣದ ಕೊರತೆ ಇರುವ ಕಾರಣದಿಂದ ರಾಜ್ಯದ ನಾಲ್ಕು ಬಸ್‌ ನಿಗಮಗಳು ಶೇಕಡಾ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮತ್ತು ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಎನ್‌ಡಬ್ಲುಕೆಆರ್‌ಟಿಸಿ) ಅಧಿಕಾರಿಗಳು ದರ ಪರಷ್ಕರಣೆಗೆ ಒತ್ತಾಯಿಸಿದ್ದಾರೆ.

ಸಾರಿಗೆ ನಿಗಮಗಳು ಕಳೆದ ಆರು ತಿಂಗಳುಗಳಿಂದ ಪ್ರಯಾಣ ದರ ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುತ್ತಲೇ ಬಂದಿವೆ. ಈ ಕುರಿತು ಸರ್ಕಾರದ ಜೊತೆ ಚರ್ಚೆ ನಡೆಸಿ ನಂತರ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ನಿಗಮಗಳಲ್ಲಿ ಹಣದ ಕೊರತೆಗೆ ಸರ್ಕಾರದಿಂದ ಬರಬೇಕಾದ ಬಾಕಿ ವೇತನವು ಒಂದು ಕಾರಣ ಎಂದು ಡಿಸೆಂಬರ್‌.31ರಂದು ಆರ್‌ಟಿಸಿ ಯೂನಿಯನ್‌ಗಳ ಸದಸ್ಯರು ಮುಷ್ಕರ ಮಾಡಲು ನಿರ್ಧರಿಸಿದ್ದರು.

2014ರಲ್ಲಿ ಬಿಎಂಟಿಸಿ, 2020 ರಲ್ಲಿ ಕೆಸ್‌ಆರ್‌ಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲುಕೆಆರ್‌ಟಿಸಿ ದರ ಪರಿಷ್ಕರಿಸಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಸರ್ಕಾರವು ದರ ಹೆಚ್ಚಿಸಿಲ್ಲ. ಇತ್ತೀಚಿನ ವರ್ಷಗಳಲ್ಲಿ ಇಂಧನ, ಬಸ್‌ನ ಬಿಡಿ ಭಾಗಗಳ ಬೆಲೆ ಹೆಚ್ಚಾಗಿದ್ದು ಉತ್ಪಾದಿತ ಆದಾಯದ ಶೇ. 45ಕ್ಕಿಂತ ಹೆಚ್ಚು ಡೀಸೆಲ್‌ಗೆ ಖರ್ಚು ಮಾಡಲಾಗುತ್ತಿದೆ. ಉಳಿದಂತೆ ಉದ್ಯೋಗಿಗಳ ಸಂಬಳಕ್ಕೂ ಆದಾಯದ ಹಣವನ್ನು ನೀಡಲಾಗುತ್ತಿದೆ. ಇದರಿಂದ ನಿಗಮಗಳು ನಷ್ಟದಲ್ಲಿವೆ ಎಂದು ಅಧಿಕಾರಗಳು ತಿಳಿಸಿದ್ದಾರೆ.

ಸರ್ಕಾರವೂ ಕೂಡ ಪ್ರಯಾಣ ದರ ಏರಿಕೆಗೆ ಸಕರಾತ್ಮಕವಾಗಿ ಸ್ಪಂದಿಸಿದ್ದು ಈ ಬಾರಿ ಪರಿಷ್ಕರಣೆ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago