ಹುಬ್ಬಳ್ಳಿ: ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ. ಈ ದೇಶದ ಆರ್ಥಿಕ ವ್ಯವಸ್ಥೆ ಮೂಲೆಗುಂಪಾಗಿದೆ. ದೇಶದ ಆರ್ಥಿಕ ವ್ಯವಸ್ಥೆ ಹಾಳುಮಾಡಿರೋದು ಪಾಪ ಅಲ್ವಾ ಎಂದು ಸಚಿವ ಸಂತೋಷ್ ಲಾಡ್ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಕಿಡಿಕಾಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದು ಸರಿಯಾಗಿಯೇ ಇದೆ ಎಂದು ಬ್ಯಾಟ್ ಬೀಸಿದರು.
ಇನ್ನು ಬಿಜೆಪಿಯವರು ದೇಶದ ಸಾಲದ ಬಗ್ಗೆ ಯಾಕೆ ಮಾತನಾಡಲ್ಲ. ನಾನೊಬ್ಬ ಹಿಂದೂ ಇದೀನಿ. ಅಮಿತ್ ಶಾ ಹಾಗೋ ಮೋದಿ ಪಾಪ ಎಲ್ಲಿ ಹೋದ್ರೂ ತೊಳೆಯೋಕೆ ಆಗಲ್ಲ. ಲೋಕಪಾಲ್‌ಗೆ ಗೌರವ ಕೊಟ್ಟಂತೆ, ನಾವು ಲೋಕಾಯುಕ್ತ ಸಂಸ್ಥೆಯನ್ನು ನಂಬುತ್ತೇವೆ. ಇದನು ಯುವ ಜನತೆ ಕೂಡ ಅರ್ಥ ಮಾಡಿಕೊಳ್ಳಬೇಕು. ದೇಶ ಬಿಜೆಪಿ-ಕಾಂಗ್ರೆಸ್‌ನವರ ಸ್ವತ್ತಲ್ಲ ಎಂದರು.
ಇನ್ನು ಕೇಂದ್ರ ಬಜೆಟ್ ಕುರಿತು ಮಾತನಾಡಿದ ಅವರು, ಕೇಂದ್ರ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ. ಎಲ್ಲಾ ಬರೀ ಡಬ್ಬ ಎಂದು ವ್ಯಂಗ್ಯವಾಡಿದರು.
ಇನ್ನು ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿದ ಅವರು, ರಾಮುಲು ನನಗೆ ವಂಡರ್ ಫುಲ್ ಫ್ರೆಂಡ್. ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತ. ನಮ್ಮ ಪಕ್ಷ ಡಬಲ್ ಡೆಕ್ಕರ್ ಬಸ್, ಯಾರಾದರೂ ನಮ್ಮ ಪಕ್ಷಕ್ಕೆ ಬರಬಹುದು ಎಂದರು.