Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯ ಬಳಿ ಅಹಿಂದ ವರ್ಗಗಳಿಗೆ ಶೇ.75% ರಷ್ಟು ಮೀಸಲಾತಿ ಬೇಡಿಕೆಯನ್ನಿಟ್ಟ ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅಹಿಂದ ವರ್ಗಗಳಿಗೆ ಶೇ.75% ರಷ್ಟು ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ತಮ್ಮ ಬೇಡಿಕೆಯನ್ನಿಟ್ಟು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65% ರಷ್ಟು ಮೀಸಲಾತಿ ಇದೆ. ಅಂತೆಯೇ ನಮ್ಮ ರಾಜ್ಯದಲ್ಲಿಯೂ ಶೋಷಿತ ವರ್ಗಗಳು ಮತ್ತು ಅಹಿಂದ ವರ್ಗಗಳ ಎಲ್ಲಾ ಹಿಂದುಳಿದ ಸಮುದಾಯಗಳು ಅಭಿವೃದ್ಧಿಯಾಗಬೇಕು. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ವರ್ಗದವರಿಗೆ ಮೀಸಲಾತಿ ನೀಡಬೇಕು ಎಂದು ತಿಳಿಸಿದರು.

ಇನ್ನು ತಮಿಳುನಾಡು 9 ನೇ ತಿದ್ದುಪಡಿ ಮಾಡಿಕೊಂಡು ಮೀಸಲಾತಿ ಹೆಚ್ಚಿಸಿದೆ. ನಮ್ಮ ರಾಜ್ಯದಲ್ಲಿಯೂ ಎಲ್ಲಾ ಶೋಷಿತ ವರ್ಗಗಳು ಅಭಿವೃದ್ಧಿಯಾಗಬೇಕೆಂದರೆ ರಾಜ್ಯ ಸರ್ಕಾರದ ವತಿಯಿಂದ ಶೇ.75% ರಷ್ಟು ಮೀಸಲಾತಿ ಘೋಷಿಸಿ, ನಮ್ಮಲ್ಲೂ ಅಂತಹ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.

 

Tags:
error: Content is protected !!