ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅಹಿಂದ ವರ್ಗಗಳಿಗೆ ಶೇ.75% ರಷ್ಟು ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಮ್ಮ ಬೇಡಿಕೆಯನ್ನಿಟ್ಟು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65% ರಷ್ಟು ಮೀಸಲಾತಿ ಇದೆ. ಅಂತೆಯೇ ನಮ್ಮ ರಾಜ್ಯದಲ್ಲಿಯೂ ಶೋಷಿತ ವರ್ಗಗಳು ಮತ್ತು ಅಹಿಂದ ವರ್ಗಗಳ ಎಲ್ಲಾ ಹಿಂದುಳಿದ ಸಮುದಾಯಗಳು ಅಭಿವೃದ್ಧಿಯಾಗಬೇಕು. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ವರ್ಗದವರಿಗೆ ಮೀಸಲಾತಿ ನೀಡಬೇಕು ಎಂದು ತಿಳಿಸಿದರು.
ಇನ್ನು ತಮಿಳುನಾಡು 9 ನೇ ತಿದ್ದುಪಡಿ ಮಾಡಿಕೊಂಡು ಮೀಸಲಾತಿ ಹೆಚ್ಚಿಸಿದೆ. ನಮ್ಮ ರಾಜ್ಯದಲ್ಲಿಯೂ ಎಲ್ಲಾ ಶೋಷಿತ ವರ್ಗಗಳು ಅಭಿವೃದ್ಧಿಯಾಗಬೇಕೆಂದರೆ ರಾಜ್ಯ ಸರ್ಕಾರದ ವತಿಯಿಂದ ಶೇ.75% ರಷ್ಟು ಮೀಸಲಾತಿ ಘೋಷಿಸಿ, ನಮ್ಮಲ್ಲೂ ಅಂತಹ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.
ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…
ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…