Mysore
32
scattered clouds

Social Media

ಶನಿವಾರ, 11 ಏಪ್ರಿಲ 2026
Light
Dark

ಪ್ರತಿ ಬಾರಿ ರಾಜ್ಯಕ್ಕೆ ತೆರಿಗೆ ಕಡಿತ ಮಾಡಲಾಗುತ್ತಿದೆ: ಕೇಂದ್ರದ ವಿರುದ್ಧ ಸತೀಶ್‌ ಜಾರಕಿಹೊಳಿ ಕಿಡಿ

ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ತೆರಿಗೆ ಕಡಿತ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. ಪ್ರತಿ ಬಾರಿ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಇದರ ವಿರುದ್ಧ ತೀವ್ರ ಹೋರಾಟ ಮಾಡಬೇಕು ಎಂದು ಕಿಡಿಕಾರಿದರು.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಿಂದುತ್ವದ ಬಗ್ಗೆ ಸಾಫ್ಟ್‌ ಕಾರ್ನರ್‌ ತೋರಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಡಿಕೆಶಿ ಈ ಹಿಂದಿನಿಂದಲೂ ದೇವಸ್ಥಾನಗಳಿಗೆ ಹೋಗುತ್ತಿದ್ದಾರೆ. ಅದರಲ್ಲೇನೂ ಹೊಸದಿಲ್ಲ. ಇನ್ನೂ ಸದ್ಗುರು ಬಗ್ಗೆ ರಾಹುಲ್‌ ಗಾಂಧಿ ಅವರು ಮಾತನಾಡಿರುವುದು ನನಗೆ ಏನೂ ಗೊತ್ತಿಲ್ಲ ಎಂದರು.

ಇದೇ ವೇಳೆ ಮಾರ್ಚ್.‌22ರಂದು ಕರ್ನಾಟಕ ಬಂದ್‌ ವಿಚಾರ ಕುರಿತಂತೆ ಮಾತನಾಡಿದ ಅವರು, ಸಿಎಂ ಶಾಂತಿಯುತವಾಗಿ ಪರಿಹರಿಸಲು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಮಟ್ಟದಲ್ಲಿ ಕೂಡ ಮಾತುಕತೆ ನಡೆಯುತ್ತಿದೆ. ಎಲ್ಲವೂ ಸರಿ ಹೋಗಲಿದೆ ಎಂದು ಹೇಳಿದರು.

 

 

Tags:
error: Content is protected !!