ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ತೆರಿಗೆ ಕಡಿತ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. ಪ್ರತಿ ಬಾರಿ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಇದರ ವಿರುದ್ಧ ತೀವ್ರ ಹೋರಾಟ ಮಾಡಬೇಕು ಎಂದು ಕಿಡಿಕಾರಿದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದುತ್ವದ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಡಿಕೆಶಿ ಈ ಹಿಂದಿನಿಂದಲೂ ದೇವಸ್ಥಾನಗಳಿಗೆ ಹೋಗುತ್ತಿದ್ದಾರೆ. ಅದರಲ್ಲೇನೂ ಹೊಸದಿಲ್ಲ. ಇನ್ನೂ ಸದ್ಗುರು ಬಗ್ಗೆ ರಾಹುಲ್ ಗಾಂಧಿ ಅವರು ಮಾತನಾಡಿರುವುದು ನನಗೆ ಏನೂ ಗೊತ್ತಿಲ್ಲ ಎಂದರು.
ಇದೇ ವೇಳೆ ಮಾರ್ಚ್.22ರಂದು ಕರ್ನಾಟಕ ಬಂದ್ ವಿಚಾರ ಕುರಿತಂತೆ ಮಾತನಾಡಿದ ಅವರು, ಸಿಎಂ ಶಾಂತಿಯುತವಾಗಿ ಪರಿಹರಿಸಲು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಮಟ್ಟದಲ್ಲಿ ಕೂಡ ಮಾತುಕತೆ ನಡೆಯುತ್ತಿದೆ. ಎಲ್ಲವೂ ಸರಿ ಹೋಗಲಿದೆ ಎಂದು ಹೇಳಿದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…