Mysore
28
scattered clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಹೊಸ ಹೆಲಿಕಾಪ್ಟರ್‌ ಖರೀದಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು : ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್‌ವೊಂದನ್ನು ಖರೀದಿಸಿದ್ದಾರೆ.

ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ಹೊಸ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಪೇಸ್ ಬುಕ್‌ನಲ್ಲಿ ಫೊಟೊ ಹಂಚಿಕೊಂಡಿದ್ದಾರೆ.

ಸಚಿವ ಸತೀಶ್‌ ಜಾರಕಿಹೊಳಿ ಅವರು ರಾಜ್ಯಾದ್ಯಂತ ಪಕ್ಷ ಸಂಘಟನೆ ಸೇರಿದಂತೆ 2028ರ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಈ ಹೊಸ ಹೆಲಿಕಾಪ್ಟರ್‌ ಅನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಲಿಕಾಪ್ಟರ್‌ ಪರಿಶೀಲಿಸುತ್ತಿರುವ ಸಚಿವರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಹೆಲಿಕಾಪ್ಟರ್​ನ ವಿಶೇಷತೆಗಳೇನು
ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ ಡಬಲ್‌ ಇಂಜಿನ್‌ ಹೊಂದಿರುವ ಹೆಲಿಕಾಪ್ಟರ್ ಇದಾಗಿದ್ದು, ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ ಅನ್ನು ಸಾಗಿಸುವ ವ್ಯವಸ್ಥೆ ಹೊಂದಿದೆ. ಈ ಹೆಲಿಕಾಪ್ಟರ್ ಎತ್ತರದಿಂದಲೂ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಸಾಮರ್ಥ್ಯವನ್ನು ಹೊಂದಿದೆ. ಇದು ಅಪಘಾತದ ಸಂದರ್ಭದಲ್ಲಿ ಅದರ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಇದಲ್ಲದೆ ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನು ಸಹ ಹೊಂದಿದೆ.

Tags:
error: Content is protected !!