ಬೆಂಗಳೂರು : ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್‌ವೊಂದನ್ನು ಖರೀದಿಸಿದ್ದಾರೆ.
ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ಹೊಸ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಪೇಸ್ ಬುಕ್‌ನಲ್ಲಿ ಫೊಟೊ ಹಂಚಿಕೊಂಡಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯಾದ್ಯಂತ ಪಕ್ಷ ಸಂಘಟನೆ ಸೇರಿದಂತೆ 2028ರ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಈ ಹೊಸ ಹೆಲಿಕಾಪ್ಟರ್ ಅನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಲಿಕಾಪ್ಟರ್ ಪರಿಶೀಲಿಸುತ್ತಿರುವ ಸಚಿವರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೆಲಿಕಾಪ್ಟರ್ನ ವಿಶೇಷತೆಗಳೇನು
ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ ಡಬಲ್ ಇಂಜಿನ್ ಹೊಂದಿರುವ ಹೆಲಿಕಾಪ್ಟರ್ ಇದಾಗಿದ್ದು, ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ ಅನ್ನು ಸಾಗಿಸುವ ವ್ಯವಸ್ಥೆ ಹೊಂದಿದೆ. ಈ ಹೆಲಿಕಾಪ್ಟರ್ ಎತ್ತರದಿಂದಲೂ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಸಾಮರ್ಥ್ಯವನ್ನು ಹೊಂದಿದೆ. ಇದು ಅಪಘಾತದ ಸಂದರ್ಭದಲ್ಲಿ ಅದರ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಇದಲ್ಲದೆ ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನು ಸಹ ಹೊಂದಿದೆ.
ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…