Mysore
31
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

ರಾಜ್ಯದಲ್ಲಿ ಎಂಇಎಸ್‌ ನಿಷೇಧಕ್ಕೆ ಚಿಂತನೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ಎಂಇಎಸ್‌ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಇಎಸ್‌ ನಾಯಕರು ಪ್ರತಿ ವರ್ಷ ಸಮಾವೇಶದ ಹೆಸರಿನಲ್ಲಿ ಅನುಮತಿ ಪಡೆಯುತ್ತಿದ್ದಾರೆ. ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಎಂಇಎಸ್‌ ನಿಷೇಧಿಸುವ ಬಗ್ಗೆ ಚಿಂತಿಸಲಾಗುವುದು. ಈ ಬಗ್ಗೆ ಪೊಲೀಸ್‌ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ಇನ್ನು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾಡಳಿತದ ಅನುಮತಿ ಪಡೆದುಕೊಳ್ಳದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಕರಾಳ ದಿನ ಆಚರಿಸಿದ್ದಾರೆ. ಅನುಮತಿ ನೀಡುವುದಿಲ್ಲವೆಂದು ಹೇಳಿದ್ದ ಜಿಲ್ಲಾಡಳಿತ ಕಾರ್ಯಕರ್ತರಿಗೆ ಪೊಲೀಸ್‌ ಭದ್ರತೆ ಒದಗಿಸಿತ್ತು.

Tags:
error: Content is protected !!