ರಾಜ್ಯ

ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಎನ್‌ಎಂಸಿಗೆ ಆಗ್ರಹ: ಸಚಿವ ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿ ಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ಆಗ್ರಹಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ 2019ರ ಬ್ಯಾಚ್‌ನ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಐದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗುತ್ತಾರೆ. ಆದರೆ ಇದಕ್ಕೆ ಪ್ರತಿಯಾಗಿ ಒಂದು ಲಕ್ಷ ವೈದ್ಯಕೀಯ ಸೀಟುಗಳು ಮಾತ್ರ ಲಭ್ಯವಿದೆ. ಇದರಿಂದ ಬೇಡಿಕೆ ಮತ್ತು ಪೂರೈಕೆ ನಡುವಿನ ಅಂತರ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಈ ಅಸಮಾನತೆಯನ್ನು ತಕ್ಷಣ ನಿವಾರಿಸಬೇಕು. ಭಾರತದಲ್ಲಿ ತರಬೇತಿ ಪಡೆಯಲಿರುವ ವೈದ್ಯರು ವಿದೇಶದಲ್ಲಿಯೂ ಹೆಚ್ಚು ಮನ್ನಣೆ ಗಳಿಸುತ್ತಿದ್ದಾರೆ. ನಮ್ಮ ವೈದ್ಯರು ಜಗತ್ತಿನ ಎಲ್ಲೆಡೆ ಚಿಕಿತ್ಸೆ ಒದಗಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಭಾರತೀಯ ವೈದ್ಯರಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆ ಜಾಗತಿಕವಾಗಿ ಭಾರತೀಯ ವೈದ್ಯಕೀಯ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ಇದೆ. ಬೇಡಿಕೆ ಮತ್ತು ಲಭ್ಯತೆಯ ಅಂತರ ಕಡಿಮೆ ಮಾಡಲು ಎನ್‌ಎಂಸಿ ಮಧ್ಯಪ್ರವೇಶಿಸಬೇಕು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

5 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

13 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago