ಕೊಪ್ಪಳ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಎಲ್ಲಾ ಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ರಾಜ್ಯ ಕಾಂಗ್ರೆಸ್ ಮಾತ್ರ ಬಿಜೆಪಿಯ ಕಳೆದ 10 ವರ್ಷಗಳ ಅವಧಿಯಲ್ಲಿನ ಅಕ್ರಮದ ವಿರುದ್ಧ ಮಾತನಡುತ್ತಾ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ.
ನಿನ್ನೆ (ಮಾ.೨೪, ಭಾನುವಾರ) ಕೊಪ್ಪಳದ ಕಾರಟಗಿಯಲ್ಲಿ ನಡೆದ ಕಾಂಗೆಸ್ ಕಾರ್ಯಕರ್ತರ ಸಭೆಯಲ್ಲಿ ಕನ್ನಡ ಸಂಸ್ಕೃತಿ ಸಚಿವ ಶಿವರಾಜ ತಂಗಟಗಿ ಮೋದಿ ವಿರುದ್ಧ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ, ಉದ್ಯೋಗ ಕೊಡಿ ಎಂದರೆ ಪಕೋಡ ಮಾರಿ ಎಂದು ಮೋದಿ ಹೇಳಿದರು. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಈ ಹೇಳಿಕೆ ನೀಡಿದ್ದಾರೆ.
ನೀಡಿದ ಭರವಸೆಯಂತೆ ಉದ್ಯೋಗ ಸೃಷ್ಟಿ ಮಾಡದ ಮೋದಿ ಅವರ ಬಗ್ಗೆ ವಿದ್ಯಾರ್ಥಿಗಳು ಮತ್ತು ಯುವಕರು ‘ಮೋದಿ ಮೋದಿ’ ಎಂದು ಕೂಗಿದರೆ ಅವರ ಕಪಾಳಕ್ಕೆ ಹೊಡೆಬೇಕು ಎಂದು ಸಚಿವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆ ಬಂದಿದೆ. ಮತ್ತೆ ಬಿಜೆಪಿಯವರು ಸುಳ್ಳು ಹೇಳಿಕೊಂಡು ಮತ ಕೇಳಲು ಬರುತ್ತಿದ್ದಾರೆ. ಅವರಿಗೆ ಮತ ಕೇಳಲು ನಾಚಿಕೆ ಆಗಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…
ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…