ರಾಜ್ಯ

ಮೋದಿ-ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು: ಸಚಿವ ತಂಗಡಗಿ

ಕೊಪ್ಪಳ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಎಲ್ಲಾ ಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ರಾಜ್ಯ ಕಾಂಗ್ರೆಸ್‌ ಮಾತ್ರ ಬಿಜೆಪಿಯ ಕಳೆದ 10 ವರ್ಷಗಳ ಅವಧಿಯಲ್ಲಿನ ಅಕ್ರಮದ ವಿರುದ್ಧ ಮಾತನಡುತ್ತಾ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ.

ನಿನ್ನೆ (ಮಾ.೨೪, ಭಾನುವಾರ) ಕೊಪ್ಪಳದ ಕಾರಟಗಿಯಲ್ಲಿ ನಡೆದ ಕಾಂಗೆಸ್‌ ಕಾರ್ಯಕರ್ತರ ಸಭೆಯಲ್ಲಿ ಕನ್ನಡ ಸಂಸ್ಕೃತಿ ಸಚಿವ ಶಿವರಾಜ ತಂಗಟಗಿ ಮೋದಿ ವಿರುದ್ಧ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ, ಉದ್ಯೋಗ ಕೊಡಿ ಎಂದರೆ ಪಕೋಡ ಮಾರಿ ಎಂದು ಮೋದಿ ಹೇಳಿದರು. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಈ ಹೇಳಿಕೆ ನೀಡಿದ್ದಾರೆ.

ನೀಡಿದ ಭರವಸೆಯಂತೆ ಉದ್ಯೋಗ ಸೃಷ್ಟಿ ಮಾಡದ ಮೋದಿ ಅವರ ಬಗ್ಗೆ ವಿದ್ಯಾರ್ಥಿಗಳು ಮತ್ತು ಯುವಕರು ‘ಮೋದಿ ಮೋದಿ’ ಎಂದು ಕೂಗಿದರೆ ಅವರ ಕಪಾಳಕ್ಕೆ ಹೊಡೆಬೇಕು ಎಂದು ಸಚಿವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆ ಬಂದಿದೆ. ಮತ್ತೆ ಬಿಜೆಪಿಯವರು ಸುಳ್ಳು ಹೇಳಿಕೊಂಡು ಮತ ಕೇಳಲು ಬರುತ್ತಿದ್ದಾರೆ. ಅವರಿಗೆ ಮತ ಕೇಳಲು ನಾಚಿಕೆ ಆಗಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago