Mysore
21
mist

Social Media

ಗುರುವಾರ, 29 ಜನವರಿ 2026
Light
Dark

ಖ್ಯಾತ ಸಾಹಿತಿ ಡಾ.ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

ಬೆಂಗಳೂರು: ಕನ್ನಡದ ಖ್ಯಾತ ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕನ್ನಡ ಸಾಹಿತ್ಯಕ್ಕೆ ಮೊಗಳ್ಳಿ ಗಣೇಶ ಅವರ ಕೊಡುಗೆ ಗಮನಾರ್ಹ. ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.

ಇದನ್ನೂ ಓದಿ:-ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಬಿ.ವೈ.ವಿಜಯೇಂದ್ರ ಭವಿಷ್ಯ

ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’ ಅವರ ಬೃಹತ್ ಕಾದಂಬರಿ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ವಿಶ್ಲೇಷಣೆ’ ಎಂಬ ಅಂಕಣ ಕೂಡಾ ಜನಪ್ರಿಯ. ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಅವರ ಚಿಂತನ ಕೃತಿ. ಗಣೇಶ್ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿದೆ.

ಮೊಗಳ್ಳಿ ಗಣೇಶ್ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜಕುಮಾರ್ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿದ್ದ ಮೂಗಳ್ಳಿ ಗಣೇಶ್ ಅವರ ನಿಧನದಿಂದ ಕನ್ನಡ ಸಾಹಿತ್ಯ ಒಬ್ಬ ಅತ್ಯುತ್ತಮ ಬರಹಗಾರನನ್ನು ಕಳೆದುಕೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Tags:
error: Content is protected !!